Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:19 - ಕನ್ನಡ ಸತ್ಯವೇದವು C.L. Bible (BSI)

19 ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣವಾಗಿಸುವೆನು. ನೀವು ಸಾಗುವಳಿ ಮಾಡುವ ಭೂಮಿಯನ್ನು ತಾಮ್ರವಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ಹಾಗು ನೀವು ಸಾಗುವಳಿಮಾಡುವ ಭೂಮಿಯನ್ನು ತಾಮ್ರದಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ನೀವು ಸಾಗುವಳಿಮಾಡುವ ಭೂವಿುಯನ್ನು ತಾಮ್ರದಂತೆಯೂ ಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿಮ್ಮ ಗರ್ವಕ್ಕೆ ಕಾರಣವಾದ ಬಲಿಷ್ಠವಾದ ಪಟ್ಟಣಗಳನ್ನು ನಾಶಮಾಡುವೆ. ಆಕಾಶವು ಮಳೆಗರೆಯುವುದಿಲ್ಲ. ಭೂಮಿಯು ಬೆಳೆಯನ್ನು ಫಲಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿಮ್ಮ ಬಲದ ಗರ್ವವನ್ನು ಮುರಿದುಹಾಕಿ, ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಕಂಚಿನಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:19
20 ತಿಳಿವುಗಳ ಹೋಲಿಕೆ  

ಆಮೇಲೆ ಆಕಾಶ ಮಳೆ ಸುರಿಸದೆ ತಾಮ್ರದಂತೆಯೂ ಕೆಳಗೆ ಭೂಮಿ ಬೆಳೆಕೊಡದೆ ಕಬ್ಬಿಣದಂತೆಯೂ ಇರುವುವು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು.


ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಸರ್ವೇಶ್ವರ ಇಂತೆನ್ನುತ್ತಾರೆ - “ಈಜಿಪ್ಟಿಗೆ ಆಧಾರವಾದವರು ಬೀಳುವರು, ಅದರ ಶಕ್ತಿ ಮದವು ಇಳಿದುಹೋಗುವುದು; ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು. ಇದು ಸರ್ವೇಶ್ವರನಾದ ದೇವರ ನುಡಿ.


“ಇದು ಸರ್ವೇಶ್ವರನಾದ ನನ್ನ ನುಡಿ - ಈ ಪ್ರಕಾರವಾಗಿಯೇ ನಾನು ಜುದೇಯದ ದೊಡ್ಡಸ್ತಿಕೆಯನ್ನು ಹಾಗು ಜೆರುಸಲೇಮಿನ ಘನವಾದ ದೊಡ್ಡಸ್ತಿಕೆಯನ್ನು ತೆಗೆದುಬಿಡುವೆನು.


ಈಜುವವರು ಕೈಯಾಡಿಸುವಂತೆ ಮೋವಾಬ್ ರೊಚ್ಚಿನಲ್ಲಿ ಕೈಯಾಡಿಸುವುದು. ಅದರ ಗರ್ವವನ್ನೂ ಕೈಚಳಕವನ್ನೂ ಸರ್ವೇಶ್ವರ ಸ್ವಾಮಿ ಅಡಗಿಸಿಬಿಡುವರು.


ದೇವರ ಮಂಜೂಷ ಶತ್ರುವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ ಹತರಾದರು.


ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು;


ತಗ್ಗಿಸುವನಾತ ಎತ್ತರದಲಿ ವಾಸಿಸುವವರನು, ಕೆಡವಿ, ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವಾ ಉನ್ನತ ನಗರವನು.


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ಇಸ್ರಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರೊಡನೆ ಅವರ ಹಿರಿಯರು, “ಸರ್ವೇಶ್ವರ ಈ ದಿನ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶಿಲೋವಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರೋಣ; ಅವರು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ರಕ್ಷಿಸಲಿ,” ಎಂದು ಸಮಾಲೋಚಿಸಿದರು.


“ಅವರ ಪಾಪಗಳ ನಿಮಿತ್ತ ಆಕಾಶವು ಮಳೆಗರೆಯದೆ ತೆರೆ ಮುಚ್ಚಿಕೊಂಡಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು, ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸಿದರೆ,


ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ !


ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಅವರು ನಿಮ್ಮ ಮೇಲೆ ಸಿಟ್ಟಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಡಬಹುದು. ಆಗ ಭೂಮಿಯಲ್ಲಿ ಬೆಳೆಯಾಗದೆ ಸರ್ವೇಶ್ವರ ನಿಮಗೆ ಕೊಡುವ ಆ ಉತ್ತಮನಾಡಿನಲ್ಲಿ ನೀವು ಉಳಿಯದೆ ಬೇಗ ನಾಶವಾಗಿಹೋಗುವಿರಿ.


ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು