Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:21 - ಕನ್ನಡ ಸತ್ಯವೇದವು C.L. Bible (BSI)

21 “ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಿಮ್ಮ ಪಾಪದ ನಿಮಿತ್ತ ಇನ್ನೂ ಏಳುಪಟ್ಟು ಹೆಚ್ಚಾಗಿ ಬಾಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿವಿುತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನೀವು ಇನ್ನೂ ನನಗೆ ವಿರುದ್ಧವಾಗಿ ತಿರುಗಿ ಅವಿಧೇಯರಾದರೆ, ನಾನು ಇನ್ನೂ ಏಳರಷ್ಟು ಕಠಿಣವಾಗಿ ನಿಮ್ಮನ್ನು ಬಾಧಿಸುವೆನು. ನೀವು ಹೆಚ್ಚು ಪಾಪಮಾಡಿದಂತೆಲ್ಲಾ ಹೆಚ್ಚೆಚ್ಚಾಗಿ ಶಿಕ್ಷಿಸಲ್ಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ ‘ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ, ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ಬಾಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:21
9 ತಿಳಿವುಗಳ ಹೋಲಿಕೆ  

“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.


“ಇದನ್ನೆಲ್ಲಾ ನೀವು ಅನುಭವಿಸಿದ ಮೇಲೂ ನನ್ನ ಮಾತಿಗೆ ಕಿವಿಗೊಡದೆ ನನಗೆ ವಿರೋಧವಾಗಿ ನಡೆದರೆ,


ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.


“ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ತಲೆಬಾಗದೆ ನನಗೆ ವಿರೋಧವಾಗಿ ನಡೆದರೆ


ನಾನೇ ನಿಮಗೆ ವಿರೋಧವಾಗಿ ನಡೆಯುವೆನು. ನಿಮ್ಮ ಪಾಪಗಳ ಕಾರಣ ನಾನೇ ನಿಮ್ಮನ್ನು ಏಳರಷ್ಟು ದಂಡಿಸುವೆನು.


ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II


ನರಪುತ್ರನೇ, ಪ್ರವಾದಿಸು, ಚಪ್ಪಾಳೆ ಬಡಿ, ಹತಿಸುವುದಾ ಖಡ್ಗ ಇಮ್ಮಡಿ ಮುಮ್ಮಡಿ. ಪ್ರಜೆಯನ್ನು ಸಂಹರಿಸುವುದಾ ಖಡ್ಗ ಅಧಿಪತಿಯನ್ನೇ ಸುತ್ತಲು ಬೀಸಿ ಹತಿಸುವುದಾ ಖಡ್ಗ.


ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು