Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:35 - ಕನ್ನಡ ಸತ್ಯವೇದವು C.L. Bible (BSI)

35 ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ದೊರಕದ ಸಕಾಲದ ವಿಶ್ರಾಂತಿಯನ್ನು ಅದು ಹಾಳುಬಿದ್ದಿರುವ ದಿನಗಳಲ್ಲಿ ಸುದೀರ್ಘವಾಗಿ ಅನುಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಸಬ್ಬತ್ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿನಗಳಲ್ಲಿ ಅನುಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿವಸಗಳಲ್ಲಿ ಅನುಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಪ್ರತಿ ಏಳು ವರ್ಷದ ನಂತರ ಭೂಮಿಗೆ ವಿಶ್ರಾಂತಿ ಕೊಡಬೇಕೆಂದು ಧರ್ಮಶಾಸ್ತ್ರ ಹೇಳಿದಂತೆ, ನೀವು ವೈರಿಗಳ ದೇಶದಲ್ಲಿ ವಾಸಿಸಿದ ಕಾಲವೆಲ್ಲಾ ನೀವು ಭೂಮಿಗೆ ಕೊಡದೆ ಇದ್ದ ವಿಶ್ರಾಂತಿಯನ್ನು ಆ ಸಮಯದಲ್ಲಿ ಭೂಮಿಯು ಪಡೆದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನೀವು ನಿಮ್ಮ ಶತ್ರುಗಳ ದೇಶದಲ್ಲಿ ವಾಸವಾಗಿದ್ದಾಗ, ಹಾಳುಬಿದ್ದ ನಿಮ್ಮ ನಾಡು ತಾನು ಹೊಂದದ ವಿಶ್ರಾಂತಿಯನ್ನು ಈಗ ಸುದೀರ್ಘವಾಗಿ ಹೊಂದಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:35
6 ತಿಳಿವುಗಳ ಹೋಲಿಕೆ  

ಸೃಷ್ಟಿಸಮಸ್ತವು ಇಂದಿನವರೆಗೆ ನರಳುತ್ತಾ ಪ್ರಸವವೇದನೆಪಡುತ್ತಾ ಇದೆ ಎಂಬುದು ನಮಗೆ ತಿಳಿದಿದೆ.


ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆಸೇರಿಸುವಾಗಲೆಲ್ಲಾ ನಿಮ್ಮ ನಾಡು ಹಾಳುಬಿದ್ದು, ತನಗೆ ಸಲ್ಲಬೇಕಾದ ಸಬ್ಬತ್ ಕಾಲವನ್ನು ಅನುಭವಿಸುವುದು. ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಸವಿಯುವುದು.


“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದು ಇದು - ನೀವು ನನ್ನ ಮಾತನ್ನು ಕೇಳಲಿಲ್ಲ, ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ. ಇಗೋ ಸರ್ವೇಶ್ವರನಾದ ನನ್ನ ನುಡಿ: ಖಡ್ಗ-ವ್ಯಾಧಿ-ಕ್ಷಾಮ ಇವುಗಳಿಗೆ ನೀವು ಗುರಿ ಆಗುವಂತೆ ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ. ಲೋಕದ ಸಮಸ್ತ ರಾಜ್ಯಗಳ ಕಣ್ಣಿಗೆ ನೀವು ಭಯಾಸ್ಪದವಾಗುವಂತೆ ಮಾಡುವೆನು.


“ಸರ್ವೇಶ್ವರ ನಿಮಗೆ ಕೊಡುವ ನಾಡಿಗೆ ನೀವು ಬಂದಾಗ ಆ ನಾಡು ಸರ್ವೇಶ್ವರನ ಗೌರವಾರ್ಥ ವಿಶ್ರಾಂತಿಯನ್ನು ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು