36 “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.
36 ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದಲ್ಲಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವು ಅವರಲ್ಲಿ ದಿಗಿಲುಹುಟ್ಟಿಸುವದು; ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು; ಯಾರೂ ಹಿಂದಟ್ಟಿ ಬಾರದಿರುವಾಗಲೂ ಅವರು ಓಡಿ ಬೀಳುವರು;
36 ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು.
36 “ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.
‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”
ಒಬ್ಬ ಸೈನಿಕನ ಬೆದರಿಕೆಗೆ ಸಾವಿರ ಜನರು ಪರಾರಿಯಾಗುವರು. ಐದು ಸೈನಿಕರ ಬೆದರಿಕೆಗೆ ನೀವೆಲ್ಲರೂ ಓಡಿಹೋಗುವಿರಿ. ಕಟ್ಟಕಡೆಗೆ ಬೆಟ್ಟದ ತುದಿಯಲ್ಲಿರುವ ಧ್ವಜಸ್ತಂಭದಂತೆ, ಗುಡ್ಡದ ಮೇಲಿರುವ ಕೈಕಂಬದಂತೆ ಒಬ್ಬಂಟಿಗನಾಗಿ ಉಳಿಯುವಿರಿ.
ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.
ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು.
ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.
ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಯೇಲರ ಧೈರ್ಯ ಕರಗಿ ನೀರಾಯಿತು.
ದಾಳಿಮಾಡುವ ಆ ಬಾಬಿಲೋನಿಯರನ್ನು ನೀವು ಪೂರ್ತಿಯಾಗಿ ಸೋಲಿಸಿದರೂ, ಅವರಲ್ಲಿ ಗಾಯಗೊಂಡವರು ಮಾತ್ರ ನಿಮ್ಮಲ್ಲಿ ಉಳಿದರೂ, ಆ ಗಾಯಗೊಂಡವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ನಗರವನ್ನು ಬೆಂಕಿಯಿಂದ ಸುಟ್ಟುಬಿಡುವರು.