Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:4 - ಕನ್ನಡ ಸತ್ಯವೇದವು C.L. Bible (BSI)

4 ನಾನು ಮುಂಗಾರು ಹಿಂಗಾರು ಮಳೆಗಳನ್ನು ಕಾಲಕಾಲಕ್ಕೆ ಸರಿಯಾಗಿ ಬರಮಾಡುವೆನು. ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುವು. ತೋಟದ ಮರಗಳು ಹೇರಳವಾದ ಫಲಕೊಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಮುಂಗಾರು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೇ ಬೆಳೆಯನ್ನು ಕೊಡುವವು, ತೋಟದ ಮರಗಳು ಬಹಳ ಫಲಕೊಡುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಅವುಗಳನ್ನು ಅನುಸರಿಸಿದರೆ, ನಾನು ಸರಿಯಾದ ಸಮಯದಲ್ಲಿ ಮಳೆಯನ್ನು ಅನುಗ್ರಹಿಸುವೆನು. ಭೂಮಿಯು ಒಳ್ಳೆಯ ಬೆಳೆಯನ್ನು ಕೊಡುವುದು ಮತ್ತು ತೋಟದ ಮರಗಳು ತಮ್ಮ ಫಲಗಳನ್ನು ಕೊಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮಗೆ ಮಳೆಯನ್ನು ತಕ್ಕ ಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವುದು. ಭೂಮಿಯ ಮರಗಳು ಅವುಗಳ ಫಲವನ್ನು ಕೊಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:4
31 ತಿಳಿವುಗಳ ಹೋಲಿಕೆ  

ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.


ಇತ್ತನೆಮ್ಮ ದೇವನು ಆಶೀರ್ವಾದವನು I ಕೊಟ್ಟಿತೆಮ್ಮ ಭೂಮಿಯು ಸಂತುಷ್ಟ ಬೆಳೆಯನು II


ನೀವು ಕ್ಷಾಮದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ ನಾನು ಮರದ ಹಣ್ಣನ್ನೂ ಹೊಲದ ಬೆಳೆಯನ್ನೂ ಹೆಚ್ಚಿಸುವೆನು.


ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ಮಳೆಗರೆಯುತ್ತಾನೆ ಭೂಮಿಯ ಮೇಲೆ ನೀರೊದಗಿಸುತ್ತಾನೆ ಹೊಲಗದ್ದೆಗಳಿಗೆ.


ಸರ್ವೇಶ್ವರ ಆಕಾಶದಲ್ಲಿರುವ ತಮ್ಮ ಜಲನಿಧಿಯನ್ನು ತೆರೆದು ನಿಮ್ಮ ನಾಡಿನ ಮೇಲೆ, ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲ ವ್ಯವಸಾಯವನ್ನೂ ಫಲಭರಿತವಾಗಿ ಮಾಡುವರು. “ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.


ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಆಗುವುದು. ನಿಮ್ಮ ಭೂಮಿಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಅವರು ಸರಿಯಾಗಿ ಸುರಿಸುವರು.


ಆರನೆಯ ವರ್ಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.


ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಪ್ರಭು ಕೊಟ್ಟೇ ತೀರುವನು ಒಳಿತನು I ನಮ್ಮ ನಾಡು ನೀಡುವುದು ಬೆಳೆಯನು II


ದೇವಾ, ಹೇರಳವಾಗಿ ನೀ ಸುರಿಮಳೆಗರೆದೆ I ಬತ್ತಿದ ನಿನ್ನ ಸೊತ್ತನ್ನು ಸಮೃದ್ಧಿಗೊಳಿಸಿದೆ II


ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ.


ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಮಲೆಗಳ ಮೇಲೆ ಮಳೆಗರೆಯುವೆ ಗಗನದಿಂದ I ತೃಪ್ತಿಗೊಂಡಿದೆ ಪೃಥ್ವಿಯು ನಿನ್ನ ಕೃಪೆಗಳಿಂದ II


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ನಿಮ್ಮ ಭೂಮಿ ಫಲವತ್ತಾಗುವುದು; ನಿಮಗೆ ಸಮೃದ್ಧಿಯಾದ ಊಟ ದೊರಕುವುದು ಮತ್ತು ಆ ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.


ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ಲಕ್ಷ್ಯಕೊಟ್ಟು ನಿಮ್ಮ ದೇವರಾದ ಸರ್ವೇಶ್ವರನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಅವರಿಗೆ ಸೇವೆಸಲ್ಲಿಸಿದರೆ,


ನಮ್ಮೆಲ್ಲರನು ದೇವನು ಹರಸಲಿ I ಎಲ್ಲೆಡೆ ಆತನ ಭಯಭಕ್ತಿಯಿರಲಿ II


ನಡೆವುದು ಪ್ರಭುವಿನ ಮುಂದೆ ನೀತಿ I ಮಾಡುವುದು ಆತನ ಹೆಜ್ಜೆಗೆ ಹಾದಿ II


ಭೂಜಂತುಗಳೇ ಅಂಜಬೇಡಿ, ವನವೃಕ್ಷಗಳು ಫಲಭರಿತವಾಗಿರುವುವು; ಅಂಜೂರ, ದ್ರಾಕ್ಷಿಗಳೆಲ್ಲವೂ ತುಂಬಿ ತುಳುಕುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು