Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:44 - ಕನ್ನಡ ಸತ್ಯವೇದವು C.L. Bible (BSI)

44 ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ. ತಾತ್ಸಾರ ಮಾಡುವುದಿಲ್ಲ, ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವುದಿಲ್ಲ. ನಾನು ಅವರ ದೇವರಾದ ಸರ್ವೇಶ್ವರನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವದಿಲ್ಲ, ತಾತ್ಸಾರಮಾಡುವದಿಲ್ಲ; ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವದಿಲ್ಲ; ಅವರನ್ನು ಇಲ್ಲದಂತೆ ಮಾಡುವದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಅವರು ನಿಜವಾಗಿ ಪಾಪಮಾಡಿದ್ದರೂ ಸಹಾಯಕ್ಕಾಗಿ ಅವರು ನನ್ನ ಬಳಿಗೆ ಬಂದರೆ ನಾನು ಅವರಿಗೆ ವಿಮುಖನಾಗುವುದಿಲ್ಲ. ಅವರು ತಮ್ಮ ಶತ್ರುಗಳ ದೇಶದಲ್ಲಿದ್ದರೂ ನಾನು ಅವರಿಗೆ ಕಿವಿಗೊಡುವೆನು. ಅವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ. ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ. ಯಾಕೆಂದರೆ ನಾನೇ ಅವರ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆದರೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ಧಿಕ್ಕರಿಸದೆ, ಅವರನ್ನು ಅಸಹ್ಯಪಡದೆ, ಅವರನ್ನು ಸಂಪೂರ್ಣವಾಗಿ ನಾಶಮಾಡದೆಯೂ, ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು. ಏಕೆಂದರೆ ಅವರ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:44
20 ತಿಳಿವುಗಳ ಹೋಲಿಕೆ  

ದೇವರು ಮುಂಚಿತವಾಗಿಯೇ ಆರಿಸಿಕೊಂಡಿದ್ದ ತಮ್ಮ ಜನಾಂಗವನ್ನು ತಿರಸ್ಕರಿಸಲಿಲ್ಲ. ಎಲೀಯನ ವಿಷಯವಾಗಿ ಪವಿತ್ರಗ್ರಂಥವು ಹೇಳಿರುವುದು ನಿಮಗೆ ತಿಳಿಯದೋ?


ಆದರೆ, ನೀವು ದಯಾಪೂರಿತರು, ಕರುಣಾಮಯ ದೇವರು! ನಿಮ್ಮ ಮಹಾಕೃಪಾನುಸಾರ, ಕೈಬಿಡಲಿಲ್ಲ, ನಾಶಮಾಡಲಿಲ್ಲ ಅವರನು.


ತಳ್ಳಿಬಿಡಲು ಪ್ರಭು ತನ್ನ ಜನರನು I ಕೈಬಿಡನವನು ತನ್ನ ಸ್ವಕೀಯರನು II


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.


ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನಿನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”


ನಿಮ್ಮ ನಾಮವನ್ನು ಮುಂದಿಟ್ಟು, ನಮಗೆ ಅವಮಾನ ಮಾಡಬೇಡಿ ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ ನಮ್ಮೊಡನೆ ಮಾಡಿದ ಒಡಂಬಡಿಕೆಯನ್ನು ನೆನೆಯಿರಿ. ಅದನ್ನು ಭಂಗಪಡಿಸಬೇಡಿ.


ಆದರೆ ನನ್ನೊಲವು ಅವನನ್ನು ಕೈಬಿಡದು I ನನ್ನ ಪ್ರಾಮಾಣಿಕತೆಗದು ಚ್ಯುತಿಯಾಗದು II


ನಾನು ನಿಮ್ಮ ಮಧ್ಯೆ ನಿವಾಸಿಸುವೆನು. ನಿಮ್ಮನ್ನು ಕೈಬಿಡೆನು.


ಸರ್ವೇಶ್ವರಸ್ವಾಮಿಯ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ ನಿಮ್ಮ ಪೂರ್ವಜರಿಗೆ ಪ್ರಮಾಣಮಾಡಿದ ನಾಡಿಗೆ ಕರೆದುತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲ ಎಂದು ಮಾತುಕೊಟ್ಟೆನು.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.


ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ I ಕನಿಕರಿಸುವನಾತ ತನಗೆ ಅಂಜುವವರಿಗೆ II


“ಇಸ್ರಯೇಲರ ದೇವರಾದ ಸರ್ವೇಶ್ವರ ಹೇಳುವುದನ್ನು ಕೇಳು - ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳಿಸಿಬಿಟ್ಟು ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಆದರದಿಂದ ನೋಡಿ ಅವರಿಗೆ ಒಳ್ಳೆಯದನ್ನೇ ಮಾಡುವೆನು.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು