ಯಾಜಕಕಾಂಡ 26:45 - ಕನ್ನಡ ಸತ್ಯವೇದವು C.L. Bible (BSI)45 ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ ಅವರ ಪೂರ್ವಜರನ್ನು ಎಲ್ಲ ಜನಾಂಗಗಳ ಕಣ್ಮುಂದೆಯೇ ಈಜಿಪ್ಟಿನಿಂದ ಬರಮಾಡಿದೆನು. ನಾನು ಸರ್ವೇಶ್ವರ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತ ದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಅವರಿಗೋಸ್ಕರ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆ. ನಾನು ಅವರ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದೆನು. ಬೇರೆ ಜನಾಂಗಗಳವರು ಆ ಸಂಗತಿಗಳನ್ನು ನೋಡಿದರು. ನಾನೇ ಯೆಹೋವನು!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು, ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ, ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಮುಂದೆ ಈಜಿಪ್ಟಿನಿಂದ ಬರಮಾಡಿದೆನು. ನಾನೇ ಯೆಹೋವ ದೇವರು.’ ” ಅಧ್ಯಾಯವನ್ನು ನೋಡಿ |