Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:29 - ಕನ್ನಡ ಸತ್ಯವೇದವು C.L. Bible (BSI)

29 ಸಂಪೂರ್ಣ ಸರ್ವೇಶ್ವರನ ಸೊತ್ತಾಗುವುದಕ್ಕೆ ಒಪ್ಪಿಸಲಾದದ್ದು ನರಜಾತಿಯದಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಕೇವಲ ಯೆಹೋವನ ಸೊತ್ತಾಗುವದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವದಕ್ಕಾಗದು; ಅವನಿಗೆ ಮರಣವೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆ ವಿಶೇಷ ಬಗೆಯ ಕಾಣಿಕೆಯು ಒಬ್ಬ ವ್ಯಕ್ತಿಯಾಗಿದ್ದರೆ ಅವನನ್ನು ಮತ್ತೆ ಕೊಂಡುಕೊಳ್ಳಲು ಸಾಧ್ಯವಿಲ್ಲ. ಆ ವ್ಯಕ್ತಿಯು ಕೊಲ್ಲಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ ‘ಯೆಹೋವ ದೇವರಿಗೆಂದು ಮೀಸಲಾದದನ್ನು ಯಾರೂ ಕ್ರಯಕೊಟ್ಟು ವಿಮೋಚಿಸಬಾರದು. ಅಂಥವನಿಗೆ ಮರಣವೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:29
7 ತಿಳಿವುಗಳ ಹೋಲಿಕೆ  

“ಯಾರಾದರು ನರಮಾನವನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ, ಬೇರೆ ಯಾವುದನ್ನೇ ಆಗಲಿ ಯಾವ ಶರತ್ತೂ ಇಲ್ಲದೆ ಸಂಪೂರ್ಣವಾಗಿ ಸರ್ವೇಶ್ವರನದಾಗಿರಲು ಹರಕೆ ಮಾಡಿಕೊಟ್ಟರೆ ಅದನ್ನು ಮಾರಲೂಕೂಡದು, ಬಿಡಿಸಿಕೊಳ್ಳಲೂಬಾರದು. ಸಂಪೂರ್ಣ ಸರ್ವೇಶ್ವರನದಾಗಿರಲು ಸಮರ್ಪಿಸುವಂಥದೆಲ್ಲಾ ಸರ್ವೇಶ್ವರನಿಗೆ ಮೀಸಲಾಗಿಯೇ ಇರಬೇಕು.


“ಹೊಲದ ದವಸಧಾನ್ಯವಾಗಲಿ, ತೋಟದ ಹಣ್ಣುಹಂಪಲು ಆಗಲಿ, ಭೂಮಿಯಿಂದುಂಟಾದ ಎಲ್ಲ ಆದಾಯದಲ್ಲಿ ಹತ್ತನೆಯ ಒಂದು ಪಾಲು ಸರ್ವೇಶ್ವರನದಾಗಿರಬೇಕು. ಅದು ಸರ್ವೇಶ್ವರನಿಗೆ ಮೀಸಲಾದದ್ದು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು ಜನರೆಲ್ಲರನ್ನು ಕತ್ತಿಯಿಂದ ಸಂಹರಿಸಿದನು.


ಆಗ ಆ ಪ್ರವಾದಿ ಅರಸನಿಗೆ, “ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ವ್ಯಕ್ತಿಯನ್ನು ನೀನು ಹೋಗಿಬಿಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು