ಯಾಜಕಕಾಂಡ 27:3 - ಕನ್ನಡ ಸತ್ಯವೇದವು C.L. Bible (BSI)3 ಇಪ್ಪತ್ತರಿಂದ ಅರವತ್ತು ವರ್ಷ ವಯಸ್ಸುಳ್ಳ ಪುರುಷನ ಪರವಾಗಿ ಐವತ್ತು ಬೆಳ್ಳಿನಾಣ್ಯಗಳನ್ನು ಹಾಗು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಪ್ಪತ್ತು ವರುಷದಿಂದ ಅರುವತ್ತು ವರುಷದ ಪರ್ಯಂತರ ವಯಸ್ಸುಳ್ಳ ಪುರುಷನಿಗೋಸ್ಕರ ಐವತ್ತು ರೂಪಾಯಿಗಳನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇಪ್ಪತ್ತರಿಂದ ಅರವತ್ತು ವರ್ಷದ ಒಳಗಿರುವ ಮನುಷ್ಯನ ಬೆಲೆ ಐವತ್ತು ಶೆಕೆಲ್ ಬೆಳ್ಳಿಯಾಗಿದೆ. (ಬೆಳ್ಳಿಯನ್ನು ಅಳೆಯಲು ಅಧಿಕೃತ ಅಳತೆಯನ್ನು ಉಪಯೋಗಿಸಬೇಕು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀನು ನೇಮಿಸಬೇಕಾದ ಕ್ರಯವು ಯಾವುದೆಂದರೆ, ಇಪ್ಪತ್ತರಿಂದ ಅರವತ್ತು ವಯಸ್ಸುಳ್ಳ ಪುರುಷನಿಗೆ ನೀನು ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಐವತ್ತು ಶೆಕೆಲ್ ಆಗಿರಬೇಕು. ಅಧ್ಯಾಯವನ್ನು ನೋಡಿ |
ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.
“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.