Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:30 - ಕನ್ನಡ ಸತ್ಯವೇದವು C.L. Bible (BSI)

30 “ಹೊಲದ ದವಸಧಾನ್ಯವಾಗಲಿ, ತೋಟದ ಹಣ್ಣುಹಂಪಲು ಆಗಲಿ, ಭೂಮಿಯಿಂದುಂಟಾದ ಎಲ್ಲ ಆದಾಯದಲ್ಲಿ ಹತ್ತನೆಯ ಒಂದು ಪಾಲು ಸರ್ವೇಶ್ವರನದಾಗಿರಬೇಕು. ಅದು ಸರ್ವೇಶ್ವರನಿಗೆ ಮೀಸಲಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಹೊಲದ ಬೆಳೆಯಾಗಲಿ ತೋಟದ ಹಣ್ಣುಗಳಾಗಲಿ ಭೂವಿುಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಪಾಲು ಯೆಹೋವನದಾಗಿರಬೇಕು; ಅದು ಯೆಹೋವನಿಗೆ ಮೀಸಲಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಎಲ್ಲಾ ಬೆಳೆಗಳಲ್ಲಿ ಹತ್ತರಲ್ಲಿ ಒಂದಂಶವು ಯೆಹೋವನದ್ದಾಗಿರುತ್ತದೆ. ಹೊಲಗಳ ಬೆಳೆಗಳಾಗಲಿ ಮರಗಳ ಫಲಗಳಾಗಲಿ ಅದರಲ್ಲಿ ಹತ್ತರಲ್ಲಿ ಒಂದಂಶ ಯೆಹೋವನದ್ದಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ ‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:30
22 ತಿಳಿವುಗಳ ಹೋಲಿಕೆ  

ನಾನು ಸ್ಮಾರಕಸ್ತಂಭವಾಗಿ ನೆಟ್ಟಿರುವ ಈ ಕಲ್ಲು ದೇವರ ಮನೆಯಾಗುವುದು; ಅದು ಮಾತ್ರವಲ್ಲ, ನೀವು ನನಗೆ ಕೊಡುವ ಎಲ್ಲ ಆಸ್ತಿಪಾಸ್ತಿಯಲ್ಲಿ ಹತ್ತರಲ್ಲಿ ಒಂದು ಪಾಲನ್ನು ನಿಮಗೆ ಸಮರ್ಪಿಸುತ್ತೇನೆಂದು ಮಾತುಕೊಡುತ್ತೇನೆ.”


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.


ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.


ನಾನಾದರೋ ವಾರಕ್ಕೆ ಎರಡು ದಿನ ಉಪವಾಸವ್ರತವನ್ನು ಕೈಗೊಳ್ಳುತ್ತೇನೆ; ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ.’


ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು, ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು; ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.


ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.


“ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.


ನೈವೇದ್ಯದ್ರವ್ಯ, ಧೂಪಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯರಿಗೆ, ಗಾಯಕರಿಗೆ ಹಾಗು ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗಾಗಿ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಅವನಿಗಾಗಿ ಸಿದ್ಧಮಾಡಿಸಿಕೊಟ್ಟಿದ್ದನು.


ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಯಿತು. ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ, ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.


ಸಂಪೂರ್ಣ ಸರ್ವೇಶ್ವರನ ಸೊತ್ತಾಗುವುದಕ್ಕೆ ಒಪ್ಪಿಸಲಾದದ್ದು ನರಜಾತಿಯದಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.


ಯಾವನಾದರು ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಮೌಲ್ಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.


ಅಂಥವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ ಮಿಕ್ಕ ಲೇವಿಯರೊಂದಿಗೆ ಸಮವಾದ ಪಾಲಿಗೆ ಬಾಧ್ಯನಾಗಿರುವನು.


“ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರು, ಪರದೇಶಿಗಳು, ತಾಯಿತಂದೆಯಿಲ್ಲದವರು ಹಾಗು ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕು.


ಕೊಯ್ದು ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು. ಮಿಕ್ಕ ನಾಲ್ಕು ಪಾಲು ನಿಮ್ಮದು. ಅದನ್ನು ಬಿತ್ತನೆಗಾಗಿ ಮತ್ತು ನಿಮ್ಮ ಮನೆಯವರ ಹಾಗು ಕುಟುಂಬದವರ ಜೀವನಕ್ಕಾಗಿ ಇಟ್ಟುಕೊಳ್ಳಿ,” ಎಂದು ಹೇಳಿದನು.


ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲತಕ್ಕದ್ದು ಎಂಬ ಯೋಜನೆಯನ್ನು ಜೋಸೆಫನು ಈಜಿಪ್ಟ್ ದೇಶದ ಒಂದು ಶಾಸನವನ್ನಾಗಿ ಮಾಡಿದನು. ಈ ದಿನದವರೆಗೂ ಆ ಶಾಸನ ರೂಢಿಯಲ್ಲಿದೆ. ಅರ್ಚಕರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು