ಯಾಜಕಕಾಂಡ 27:31 - ಕನ್ನಡ ಸತ್ಯವೇದವು C.L. Bible (BSI)31 ಯಾವನಾದರು ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಮೌಲ್ಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದ್ದರಿಂದ ಒಬ್ಬನು ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರೂ ಮರಳಿ ಪಡೆದುಕೊಳ್ಳಬೇಕೆಂದಿದ್ದರೆ, ಅವನು ಅದರ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಿಕೊಟ್ಟು ಮರಳಿ ಕೊಂಡುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯಾವನಾದರೂ ತನ್ನ ಹತ್ತನೆಯ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ, ಅದಕ್ಕಿಂತ ಹೆಚ್ಚಾಗಿ ಅದರ ಐದನೆಯ ಒಂದು ಪಾಲನ್ನು ಕೊಡಬೇಕು. ಅಧ್ಯಾಯವನ್ನು ನೋಡಿ |
ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.