Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:32 - ಕನ್ನಡ ಸತ್ಯವೇದವು C.L. Bible (BSI)

32 ದನಕರುಗಳೇ ಆಗಲಿ, ಆಡುಕುರಿಗಳೇ ಆಗಲಿ, ಒಡೆಯನು ಲೆಕ್ಕಿಸಿದ ಎಲ್ಲ ಪಶುಪ್ರಾಣಿಗಳಲ್ಲಿ ಪ್ರತಿ ಹತ್ತನೆಯದು ಸರ್ವೇಶ್ವರನಿಗೆ ಮೀಸಲಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ದನಗಳೇಯಾಗಲಿ ಆಡುಕುರಿಗಳೇಯಾಗಲಿ ಒಡೆಯನು ಲೆಕ್ಕಿಸಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ದನಗಳಲ್ಲಾಗಲಿ ಕುರಿಗಳಲ್ಲಾಗಲಿ ಪ್ರತಿ ಹತ್ತನೆಯ ಪಾಲನ್ನು ಯಾಜಕರು ತೆಗೆದುಕೊಳ್ಳುವರು. ಪ್ರತಿ ಹತ್ತನೆ ಪಶು ಯೆಹೋವನದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ದನಕುರಿಗಳಲ್ಲಿಯೂ, ಕುರುಬನು ಎಣಿಸುವ ಪಶುಗಳಲ್ಲಿಯೂ ಹತ್ತನೆಯ ಪಾಲು, ಹತ್ತರಲ್ಲಿ ಒಂದು ಯೆಹೋವ ದೇವರಿಗೆ ಪರಿಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:32
6 ತಿಳಿವುಗಳ ಹೋಲಿಕೆ  

ಮಲೆನಾಡಿನ, ಕೆಳನಾಡಿನ ಹಾಗೂ ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮಿನ್ ನಾಡು, ಜೆರುಸಲೇಮಿನ ಸುತ್ತಮುತ್ತಲ ಪ್ರದೇಶಗಳು, ಜುದೇಯದ ಊರುಗಳು, ಈಎಲ್ಲ ಸ್ಥಳಗಳಲ್ಲಿ ಮಂದೆಗಳು ಲೆಕ್ಕಿಸುವವನ ಕಣ್ಮುಂದೆ ಮತ್ತೆ ಹಾದುಹೋಗುವುವು. ಇದು ಸರ್ವೇಶ್ವರನಾದ ನನ್ನ ನುಡಿ.”


“ನಾನು ನಿಮ್ಮನ್ನು ಲೆಕ್ಕಿಸುವಂತೆ, ಕೋಲಿನ ಕೆಳಗೆ ಹೋಗುವಂತೆಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು,


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ಯಾವನಾದರು ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಮೌಲ್ಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.


ನಾನು ಸ್ಮಾರಕಸ್ತಂಭವಾಗಿ ನೆಟ್ಟಿರುವ ಈ ಕಲ್ಲು ದೇವರ ಮನೆಯಾಗುವುದು; ಅದು ಮಾತ್ರವಲ್ಲ, ನೀವು ನನಗೆ ಕೊಡುವ ಎಲ್ಲ ಆಸ್ತಿಪಾಸ್ತಿಯಲ್ಲಿ ಹತ್ತರಲ್ಲಿ ಒಂದು ಪಾಲನ್ನು ನಿಮಗೆ ಸಮರ್ಪಿಸುತ್ತೇನೆಂದು ಮಾತುಕೊಡುತ್ತೇನೆ.”


“ಇಗೋ, ಇಸ್ರಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಲೇವಿಯರಿಗೆ ಕೊಟ್ಟಿದ್ದೇನೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವ ಅವರಿಗೆ ಇದು ಸಲ್ಲತಕ್ಕ ಸಂಭಾವನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು