Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:34 - ಕನ್ನಡ ಸತ್ಯವೇದವು C.L. Bible (BSI)

34 ಇವೇ ಸರ್ವೇಶ್ವರನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಕೊಟ್ಟ ಆಜ್ಞೆಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರೇಲರಿಗೆ ಕೊಟ್ಟ ಆಜ್ಞೆಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲರಿಗಾಗಿ ಕೊಟ್ಟ ಆಜ್ಞೆಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:34
13 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳು ಇವುಗಳೇ.


ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಇಸ್ರಯೇಲರು ಈಜಿಪ್ಟ್ ದೇಶದಿಂದ ಬಂದಾಗ ಮೋಶೆ ಅವರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವು:


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟರು. ಸೀನಾಯಿ ಮರುಭೂಮಿಯಲ್ಲಿ ಇಸ್ರಯೇಲರು ಅರ್ಪಿಸಬೇಕಾದುದನ್ನು ಸರ್ವೇಶ್ವರನಿಗೆ ಅರ್ಪಿಸಬೇಕೆಂದು ಮೋಶೆ ಆಜ್ಞಾಪಿಸಿ ಮೇಲ್ಕಂಡ ವಿಧಿಗಳನ್ನು ಕೊಟ್ಟನು.


ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.


ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು:


ಸೀನಾಯಿ ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿ ಮೋಶೆಯ ಸಂಗಡ ಮಾತಾಡಿದ ಕಾಲದಲ್ಲಿದ್ದ ಮೋಶೆ - ಆರೋನರ ವಂಶಸ್ಥರ ವಿವರ:


ನೀವು ಪ್ರತಿನಿತ್ಯವು ಸರ್ವೇಶ್ವರನಿಗೆ ಸುಗಂಧಕರವಾದ ಈ ದಹನಬಲಿಯನ್ನು ಮಾಡಬೇಕೆಂದು ಸೀನಾಯಿ ಬೆಟ್ಟದಲ್ಲೇ ನೇಮಕವಾಯಿತು.


ಮೋಶೆ ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನನ್ನು ಮತ್ತು ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸ ಓಗನನ್ನು ಜಯಿಸಿದನು. ತರುವಾಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು