Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:1 - ಕನ್ನಡ ಸತ್ಯವೇದವು C.L. Bible (BSI)

1 “ಯಾರಾದರು ಶಾಂತಿಸಮಾಧಾನಕ್ಕಾಗಿ ಬಲಿದಾನ ಮಾಡಬೇಕಾದರೆ ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಹೆಣ್ಣಾಗಲಿ ಪೂರ್ಣಾಂಗವಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ತನ್ನ ಪಶುಮಂದೆಯಿಂದ ಗಂಡುಪಶುವನ್ನಾಗಲಿ ಹೆಣ್ಣುಪಶುವನ್ನಾಗಲಿ ಅರ್ಪಿಸಬಹುದು. ಯೆಹೋವನ ಎದುರಿನಲ್ಲಿ ಅರ್ಪಿಸಲ್ಪಡುವ ಅದು ಅಂಗದೋಷವಿಲ್ಲದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ ‘ಯಾರಾದರು ಸಮಾಧಾನ ಸಮರ್ಪಣೆಗಾಗಿ ಬಲಿದಾನ ಮಾಡಬೇಕಾದರೆ, ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಯೆಹೋವ ದೇವರ ದೃಷ್ಟಿಯಲ್ಲಿ ಕಳಂಕರಹಿತವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:1
29 ತಿಳಿವುಗಳ ಹೋಲಿಕೆ  

ದಹನಬಲಿಗಾಗಿ ಕಳಂಕರಹಿತವಾದ ಒಂದು ವರ್ಷದ ಟಗರು, ಪಾಪಪರಿಹಾರ ಬಲಿಗಾಗಿ ಕಳಂಕರಹಿತವಾದ ಒಂದು ವರ್ಷದ ಕುರಿ, ಸಮಾಧಾನ ಬಲಿಗಾಗಿ ಕಳಂಕರಹಿತವಾದ ಒಂದು ಟಗರು.


ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.


ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಕುರುಡಾದ ಪಶುಗಳನ್ನು ಬಲಿಯರ್ಪಿಸುವುದು ತಪ್ಪಲ್ಲವೆ? ಊನವಾದ ರೋಗದ ಪಶುಗಳನ್ನು ಅರ್ಪಿಸುವುದು ದೋಷವಲ್ಲವೇ? ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ಇಂಥದ್ದನ್ನು ನಿಮ್ಮ ರಾಜಪಾಲನಿಗೆ ಕಾಣಿಕೆಯಾಗಿ ಕೊಟ್ಟರೆ ಅವನು ನಿಮ್ಮನ್ನು ಮೆಚ್ಚುವನೋ ಅಥವಾ ನಿಮ್ಮ ಕೋರಿಕೆಯನ್ನು ನೆರವೇರಿಸುವನೋ?’


ಇನ್ನೂರು ಕುರಿಗಳಲ್ಲಿ ಇಸ್ರಯೇಲಿನ ನೀರಾವರಿಯ ಹುಲ್ಲುಗಾವಲಿನ ಒಂದು ಕುರಿ;


“ನನ್ನ ಬಯಕೆ ಈಡೇರಲೆಂದು ಬಲಿಯರ್ಪಿಸಿದ್ದೇನೆ; ಇಂದೇ ನನ್ನ ಹರಕೆಯನ್ನು ತೀರಿಸಿದ್ದೇನೆ.


ಅಲ್ಲಿ ಸರ್ವೇಶ್ವರಸ್ವಾಮಿಗಾಗಿ ಬಲಿಪೀಠವನ್ನು ಕಟ್ಟಿಸಿದನು. ಅದರ ಮೇಲೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಿ ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಮೊರೆಯನ್ನು ಆಲಿಸಿ, ಆಕಾಶದಿಂದ ಬಲಿಪೀಠದ ಮೇಲೆ ಬೆಂಕಿಯನ್ನು ಬರಮಾಡಿ,


ಮರುದಿವಸ ಅವರು ಬೆಳಿಗ್ಗೆ ಎದ್ದು ಬಲಿಪೀಠವನ್ನು ಕಟ್ಟಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.


ಆಗ ಎಲ್ಲ ಜನರು ಬೇತೇಲಿಗೆ ಹೋಗಿ ಅಲ್ಲಿ ಸರ್ವೇಶ್ವರನ ಮುಂದೆ ಅಳುತ್ತಾ ಕುಳಿತು, ಸಾಯಂಕಾಲದವರೆಗೆ ಉಪವಾಸಮಾಡಿದರು. ಇದಲ್ಲದೆ ಅವರು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.


ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀನಾದಾಬನ ಮಗ ನಹಶೋನನು ಸಮರ್ಪಿಸಿದ ಕಾಣಿಕೆಗಳು ಇವೇ.


ಏಕೆಂದರೆ ಬಲಿಪ್ರಾಣಿಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು ಸರ್ವೇಶ್ವರನ ಮುಂದೆ ಶಾಂತಿಸಮಾಧಾನದ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ಶಾಶ್ವತ ನಿಯಮವಾಗಿ ಇಸ್ರಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು, ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟವು. ಇಸ್ರಯೇಲರು ಸಮಾಧಾನದ ಬಲಿದಾನಕ್ಕಾಗಿ ಪ್ರಾಣಿಗಳನ್ನು ವಧಿಸಿ ಸರ್ವೇಶ್ವರನಾದ ನನಗೆ ಕಾಣಿಕೆಯನ್ನು ಅರ್ಪಿಸುವಾಗಲೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.


ಇಸ್ರಯೇಲರ ಯೌವನಸ್ಥರು ಸರ್ವೇಶ್ವರ ಸ್ವಾಮಿಗೆ ದಹನಬಲಿಗಳನ್ನು ಅರ್ಪಿಸುವಂತೆಯೂ ಸಮಾಧಾನದ ಬಲಿಗಾಗಿ ಹೋರಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು.


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


“ಶಾಂತಿಸಮಾಧಾನಕ್ಕಾಗಿ ಸರ್ವೇಶ್ವರನಿಗೆ ಸಮರ್ಪಿಸುವ ಬಲಿಪ್ರಾಣಿ ಕುರಿ ಅಥವಾ ಆಡು ಆಗಿದ್ದರೆ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.


ಅನಂತರ ಜನರ ಪರವಾಗಿ ಶಾಂತಿಸಮಾಧಾನದ ಬಲಿದಾನಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.


ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಪೆದಾಚೂರನ ಮಗ ಗಮ್ಲೀಯೇಲನು ಸಮರ್ಪಿಸಿದ ಕಾಣಿಕೆಗಳು ಇವೇ.


‘ನೀವು ಅರ್ಪಿಸುವಂಥದ್ದು ಹೋರಿಯಾಗಿದ್ದರೆ, ಅದು ಸರ್ವಾಂಗಹೋಮವೇ ಆಗಿರಲಿ ಅಥವಾ ಹರಕೆಯ ಹಾಗೂ ಬೇರೆ ವಿಧವಾದ ಬಲಿಯೇ ಆಗಿರಲಿ,


ದಹನಬಲಿಗಳನ್ನು ಸಮರ್ಪಿಸುವಾಗ ರಕ್ತಮಾಂಸಗಳೆರಡನ್ನೂ ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠದಲ್ಲಿ ದಹಿಸಿಬಿಡಬೇಕು. ಮಿಕ್ಕಬಲಿಗಳನ್ನು ಅರ್ಪಿಸುವಾಗ ರಕ್ತವನ್ನು ಸರ್ವೇಶ್ವರನ ಬಲಿಪೀಠದ ಮೇಲೆ ಸುರಿದುಬಿಟ್ಟು, ಮಾಂಸವನ್ನು ಊಟಮಾಡಬೇಕು.


ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಬಲಿಪೀಠದ ಮೇಲೆ ನಿ‍ಮ್ಮ ಪರವಾಗಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಸರ್ವೇಶ್ವರನಾದ ದೇವರ ನುಡಿ.”


“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.


ಶಾಂತಿಸಮಾಧಾನ ಬಲಿಗಾಗಿ ಒಂದು ಹೋರಿ ಹಾಗು ಒಂದು ಟಗರನ್ನು ಮತ್ತು ನೈವೇದ್ಯಕ್ಕಾಗಿ ಎಣ್ಣೆ ಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಬರಬೇಕೆಂದು ಆಜ್ಞಾಪಿಸು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು