Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:11 - ಕನ್ನಡ ಸತ್ಯವೇದವು C.L. Bible (BSI)

11 ಯಾಜಕನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ದಹನಬಲಿಯ ಆಹಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾಜಕನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಮೂಲಕವಾಗಿ ಯೆಹೋವನಿಗೆ ಆಹಾರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದು ಯೆಹೋವನಿಗೆ ಬೆಂಕಿಯ ಮೂಲಕ ಅರ್ಪಿಸಿದ ಆಹಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:11
17 ತಿಳಿವುಗಳ ಹೋಲಿಕೆ  

ನಿನ್ನ ಸಂತತಿಯವರಲ್ಲಿ, ತಲತಲಾಂತರದವರೆಗೂ, ಯಾವ ಅಂಗವಿಕಲನೂ ದೇವ ಆಹಾರವನ್ನು ಸಮರ್ಪಿಸಲು ನನ್ನ ಸನ್ನಿಧಿಗೆ ಬರಬಾರದು. ಅಂಗವಿಕಲನು ಈ ಸೇವೆಯನ್ನು ವಹಿಸಿಕೊಳ್ಳಲೇಕೂಡದು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವೆ ಮಾಡುವ ದೇವರ ಹೆಸರಿಗೆ ಅಪಕೀರ್ತಿ ತರಬಾರದು. ತಮ್ಮ ದೇವರ ಆಹಾರವನ್ನು, ಅಂದರೆ ಸರ್ವೇಶ್ವರನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವುದರಿಂದ ಪವಿತ್ರರಾಗಿರಬೇಕು.


ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ಯಾಜಕನು ಅದನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸುಗಂಧಹೋಮ ರೂಪವಾಗಿ ಸರ್ವೇಶ್ವರನಿಗೆ ಆಹಾರವಾಗಿರುವುದು. ಬಲಿಪ್ರಾಣಿಗಳ ಕೊಬ್ಬೆಲ್ಲವು ಸರ್ವೇಶ್ವರನದು.


ಆರೋನನ ವಂಶಜರಾದ ಯಾಜಕರು ಅದನ್ನು ಬಲಿಪೀಠದಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ದಹನಬಲಿಪದಾರ್ಥಗಳೊಡನೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧ ಬಲಿಯಾಗಿರುವುದು.


“ನನ್ನ ಬಲಿಪೀಠದ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸಿ ನನ್ನನ್ನು ಅವಮಾನಗೊಳಿಸಿದ್ದೀರಿ;” “ಯಾವ ವಿಷಯದಲ್ಲಿ ನಿಮಗೆ ಅಗೌರವ ತಂದಿದ್ದೇವೆ ಎನ್ನುತ್ತೀರೋ? ‘ಸರ್ವೇಶ್ವರಸ್ವಾಮಿಯ ವೇದಿಕೆಗೆ ಘನತೆ ಏನಿದೆ?’ ಎಂದು ಹೇಳಿಕೊಳ್ಳುವುದರಲ್ಲಿದೆ ಆ ಅಗೌರವ.


ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


“ನನಗೆ ಸಮರ್ಪಿಸಬೇಕಾದ ಬಲಿಗಳನ್ನು, ಅಂದರೆ ದಹನಬಲಿಗಾಗಿ ಇಸ್ರಯೇಲರು ನನಗೆ ತರುವ ಆಹಾರವನ್ನು ತಕ್ಕ ಕಾಲದಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ವಿಧಿಸು.


ಅನ್ಯದೇಶದವನಿಂದ ತೆಗೆದುಕೊಂಡ ಅಂಥ ಪ್ರಾಣಿಯನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು. ಅದು ಕುಂದುಳ್ಳದ್ದು, ಕಳಂಕಿತವಾದದ್ದು. ಆದಕಾರಣ ಸ್ವೀಕೃತವಾಗದು.”


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು.


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ನೀವಾದರೋ, ‘ಸರ್ವೇಶ್ವರಸ್ವಾಮಿಯ ಪೀಠ ಅಶುದ್ಧ; ಅದರ ಮೇಲಿನ ಆಹಾರಪದಾರ್ಥಗಳು ಅಸಹ್ಯ’ ಎಂದು ಹೇಳಿ ನನ್ನ ನಾಮಕ್ಕೆ ಅಪಕೀರ್ತಿ ತರುತ್ತೀರಿ.


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಆ ಏಳು ದಿನಗಳಲ್ಲೂ ದೈನಿಕ ದಹನಬಲಿಯನ್ನು ಮತ್ತು ಅದಕ್ಕೆ ಸೇರಿದ ಪಾನಾರ್ಪಣೆಯನ್ನು ಒಪ್ಪಿಸಬೇಕಲ್ಲದೆ ಮೇಲೆ ಹೇಳಿದ ಕ್ರಮದ ಮೇರೆಗೆ ಪ್ರತಿದಿನವೂ ದಹನಬಲಿ ರೂಪವಾಗಿ ಸರ್ವೇಶ್ವರನಿಗೆ ಅನ್ನಾರ್ಪಣೆ ಮಾಡಿ ಅವರಿಗೆ ಸುಗಂಧ ಸುವಾಸನೆಯನ್ನು ಉಂಟುಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು