Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:2 - ಕನ್ನಡ ಸತ್ಯವೇದವು C.L. Bible (BSI)

2 ಅವನು ಆ ಪ್ರಾಣಿಯನ್ನು ಸರ್ವೇಶ್ವರನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಡಬೇಕು; ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಬಾಗಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ವ್ಯಕ್ತಿಯು ತನ್ನ ಕೈಯನ್ನು ಪಶುವಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಬಾಗಿಲಲ್ಲಿ ಅದನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ಆ ರಕ್ತವನ್ನು ಯಜ್ಞವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:2
23 ತಿಳಿವುಗಳ ಹೋಲಿಕೆ  

ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತರಿಸಿ ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ಕೈಗಳನ್ನಿಟ್ಟ ನಂತರ


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ಇದಾದ ಮೇಲೆ ಯಾಜಕಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ಮೋಶೆ ತರಿಸಿದನು. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು.


ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿಪೀಠದ ಉತ್ತರದ ಕಡೆ ವಧಿಸಲಿ. ತರುವಾಯ ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಲಿ.


ಅದನ್ನು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು.


ಅದನ್ನು ವಧಿಸಿ ಅದರ ರಕ್ತವನ್ನು ಬಲಿಪೀಠದ ನಾಲ್ಕು ಕಡೆಗಳಿಗೆ ಸುರಿ.


ಆ ಬಲಿಪ್ರಾಣಿಯ ಈ ಭಾಗಗಳನ್ನು, ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ತೆಗೆದು ಸರ್ವೇಶ್ವರನಿಗೆ ಹೋಮಮಾಡಬೇಕು.


ದೇವದರ್ಶನದ ಗುಡಾರದ ಎದುರಿಗೆ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.


ಹಸುವಿನ ಮತ್ತು ಆಡುಕುರಿಗಳ ಚೊಚ್ಚಲು ಮರಿಗಳನ್ನು ಬಿಡಕೂಡದು. ಅವು ದೇವರ ಸೊತ್ತು. ಆದ್ದರಿಂದ ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸು; ಅವುಗಳ ಕೊಬ್ಬನ್ನು ಬಲಿಕಾಣಿಕೆಯಾಗಿ ದಹಿಸು.


ಇದಾದ ಬಳಿಕ ಆ ಟಗರುಗಳಲ್ಲಿ ಒಂದನ್ನು ತೆಗೆದುಕೊ. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ


ಅನಂತರ ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ಮೇಲೆ ತಮ್ಮ ಕೈಗಳನ್ನು ಇಟ್ಟ ನಂತರ ಅದನ್ನು ವಧಿಸು.


ಇಸ್ರಯೇಲರಲ್ಲಿ ಯಾರಾದರು ಹೋರಿಯನ್ನಾಗಲಿ, ಕುರಿಯನ್ನಾಗಲಿ, ಆಡನ್ನಾಗಲಿ ಬಲಿಕೊಡುವಾಗ ಅದನ್ನು ಸರ್ವೇಶ್ವರನಿಗೆ ಸಮರ್ಪಿಸಲು ದೇವಗುಡಾರದ ಬಾಗಿಲಿಗೆ ತರದೆ


ಪಾಳೆಯದ ಒಳಗಾಗಲಿ, ಹೊರಗಾಗಲಿ ಕೊಯ್ದರೆ ಅಂಥವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದ್ದರಿಂದ ಕುಲದಿಂದ ಬಹಿಷ್ಕೃತನಾಗಬೇಕು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು