Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:6 - ಕನ್ನಡ ಸತ್ಯವೇದವು C.L. Bible (BSI)

6 “ಶಾಂತಿಸಮಾಧಾನಕ್ಕಾಗಿ ಸರ್ವೇಶ್ವರನಿಗೆ ಸಮರ್ಪಿಸುವ ಬಲಿಪ್ರಾಣಿ ಕುರಿ ಅಥವಾ ಆಡು ಆಗಿದ್ದರೆ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ ಅದು ಗಂಡಾಗಲಿ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಯೆಹೋವನಿಗೆ ಸಮಾಧಾನಯಜ್ಞವಾಗಿ ಕೊಡುವಾಗ, ಆ ಪಶುವಿನಲ್ಲಿ ಯಾವ ದೋಷವೂ ಇರಬಾರದು. ಅದು ಗಂಡು ಅಥವಾ ಹೆಣ್ಣಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಅವನ ಕಾಣಿಕೆಯು ಸಮಾಧಾನದ ಬಲಿಯಾಗಿ, ಅದು ಯೆಹೋವ ದೇವರಿಗೆ ತನ್ನ ಆಡುಕುರಿಗಳಿಂದಾದ ಕಾಣಿಕೆಯಾಗಿದ್ದರೆ, ಗಂಡಾಗಲಿ, ಹೆಣ್ಣಾಗಲಿ ಕಳಂಕರಹಿತವಾದದ್ದನ್ನು ಅವನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:6
16 ತಿಳಿವುಗಳ ಹೋಲಿಕೆ  

ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


“ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.


ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.


“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.


“ನಿಮ್ಮಲ್ಲಿ ಯಾರಾದರೂ ಸರ್ವೇಶ್ವರನಿಗೆ ಒಂದು ಪ್ರಾಣಿಯನ್ನು ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ ಆಡುಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.


ಕುಂದುಕೊರತೆ ಇರುವಂಥದನ್ನು ಒಪ್ಪಿಸಬಾರದು; ಅದು ಸ್ವೀಕೃತವಾಗುವುದಿಲ್ಲ.


ಮತ್ತು ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ದಹನಬಲಿದಾನವಾಗಿ ಇಲ್ಲವೆ ಸಮಾಧಾನ ಬಲಿಯಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನು ಸಮರ್ಪಿಸಬೇಕು.


“ಶಾಂತಿಸಮಾಧಾನದ ಬಲಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸುವಾಗ ಅವರಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಸಮರ್ಪಿಸಬೇಕು.


ಅದಲ್ಲದೆ, ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನೂ, ಶಾಂತಿಸಮಾಧನದ ಬಲಿಯಾಗಿ ಒಂದು ವರ್ಷದ ಎರಡು ಟಗರುಗಳನ್ನೂ ಸಮರ್ಪಿಸಬೇಕು.


ದಹನಬಲಿಗಾಗಿ ಕಳಂಕರಹಿತವಾದ ಒಂದು ವರ್ಷದ ಟಗರು, ಪಾಪಪರಿಹಾರ ಬಲಿಗಾಗಿ ಕಳಂಕರಹಿತವಾದ ಒಂದು ವರ್ಷದ ಕುರಿ, ಸಮಾಧಾನ ಬಲಿಗಾಗಿ ಕಳಂಕರಹಿತವಾದ ಒಂದು ಟಗರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು