Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:9 - ಕನ್ನಡ ಸತ್ಯವೇದವು C.L. Bible (BSI)

9 ಶಾಂತಿಸಮಾಧಾನಕ್ಕಾಗಿ ಅರ್ಪಿಸುವ ಆ ಬಲಿ ಪ್ರಾಣಿಯ ಕೊಬ್ಬನ್ನು ಸರ್ವೇಶ್ವರನಿಗೆ ಹೋಮವಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಸಮಾಧಾನಯಜ್ಞಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನೂ ವಪೆಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನು ಸಮಾಧಾನಯಜ್ಞ ಪಶುವಿನ ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನು ಕರುಳುಗಳ ಮೇಲಿರುವ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೆಲ್ಲಾ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಮಾಧಾನದ ಬಲಿಗಾಗಿ ಅದರ ಇಡೀ ಹಿಂಭಾಗವನ್ನೂ, ಅದರ ಕೊಬ್ಬನ್ನೂ, ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:9
15 ತಿಳಿವುಗಳ ಹೋಲಿಕೆ  

ಅವರು ಆ ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಕರುಳ ಸುತ್ತಲಿನ ಕೊಬ್ಬನ್ನು, ಮೂತ್ರಪಿಂಡಗಳನ್ನು ಹಾಗು ಕಾಳಿಜದ ಹತ್ತಿರವಿರುವ ಕೊಬ್ಬನ್ನು


ಪಟ್ಟಾಭಿಷೇಕಕ್ಕಾಗಿ ಸಮರ್ಪಿತವಾದ ಆ ಟಗರನ್ನೆಲ್ಲ, ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು, ಅವುಗಳ ಮೇಲಿರುವ ಕೊಬ್ಬನ್ನು,


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಮಗನೇ, ನಾನು ಹೇಳುವುದು ನಾಟಲಿ ನಿನ್ನ ಮನಸ್ಸಿಗೆ; ನನ್ನ ನಡತೆ ಆದರ್ಶಕವಾಗಿರಲಿ ನಿನ್ನ ಕಣ್ಣುಗಳಿಗೆ.


ಹಾಗೆಯೆ ಮೋಶೆ ಆ ಟಗರಿನ ಕೊಬ್ಬನ್ನು, ಅಂದರೆ ಬಾಲದ ಕೊಬ್ಬು, ಕರುಳುಗಳ ಸುತ್ತಲಿನ ಕೊಬ್ಬು, ಕಾಳಿಜದ ಹತ್ತಿರವಿರುವ ಕೊಬ್ಬು, ಮೂತ್ರಪಿಂಡಗಳು ಅವುಗಳ ಮೇಲಿರುವ ಕೊಬ್ಬು, ಇವುಗಳನ್ನು ಮತ್ತು ಬಲದೊಡೆಯನ್ನು ತೆಗೆದುಕೊಂಡನು.


ಅವನು ಅದರ ಕೊಬ್ಬನ್ನೆಲ್ಲ, ಅಂದರೆ ಬಾಲದ ಕೊಬ್ಬನ್ನು, ಕರುಳಿನ ಸುತ್ತಲಿರುವ ಕೊಬ್ಬನ್ನು,


ಏಕೆಂದರೆ ಬಲಿಪ್ರಾಣಿಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು ಸರ್ವೇಶ್ವರನ ಮುಂದೆ ಶಾಂತಿಸಮಾಧಾನದ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದ ನಂತರ ನಾನು ದಹನಬಲಿಗಳನ್ನೂ ಶಾಂತಿಸಮಾಧಾನಬಲಿಗಳನ್ನೂ ಸಮರ್ಪಿಸುವುದಕ್ಕಾಗಿ ಅಲ್ಲಿಗೆ ಬಂದು ನೀನು ಮಾಡಬೇಕಾದುದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು,” ಎಂದು ಹೇಳಿದನು.


ಜನರು ಸರ್ವೇಶ್ವರನ ಮಂಜೂಷವನ್ನು ತಂದು ದಾವೀದನು ಕಟ್ಟಿಸಿದ್ದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿ ಇಟ್ಟರು; ಆಗ ದಾವೀದನು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದನು.


ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.


ಸೊಲೊಮೋನನು ಸರ್ವೇಶ್ವರನಿಗೆ ಅರ್ಪಿಸಿದ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಒಂದು ಲಕ್ಷದ ಇಪ್ಪತ್ತುಸಾವಿರ; ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ಸರ್ವೇಶ್ವರನ ಆಲಯವನ್ನು ಪ್ರತಿಷ್ಠಿಸಿದರು.


ಸರ್ವೇಶ್ವರನ ಆಲಯದ ಮುಂದಿರುವ ತಾಮ್ರದ ಬಲಿಪೀಠ ಈ ಎಲ್ಲಾ ದಹನಬಲಿದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ‌ ಸಮಾಧಾನ ಬಲಿಯ ಕೊಬ್ಬನ್ನೂ ಹಿಡಿಸುವಷ್ಟು ದೊಡ್ಡದಾಗಿರಲಿಲ್ಲ. ಆದುದರಿಂದ ಸೊಲೊಮೋನನು ಆ ದಿವಸ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ ಅಲ್ಲಿಯೂ ಇವುಗಳನ್ನೆಲ್ಲ ಸಮರ್ಪಿಸಿದನು.


ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕಾಗಿ ಸಿದ್ಧಪಡಿಸಿದ್ದ ಗುಡಾರದೊಳಗೆ ಒಯ್ದು, ಅಲ್ಲಿ ಅದನ್ನು ಸ್ಥಾಪಿಸಿದರು. ದೇವರಿಗೆ ದಹನಬಲಿಗಳನ್ನೂ, ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು