Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:12 - ಕನ್ನಡ ಸತ್ಯವೇದವು C.L. Bible (BSI)

12 ಹಾಗು ಕರುಳುಗಳಲ್ಲಿರುವ ಕಲ್ಮಶ ಇವುಗಳನ್ನೆಲ್ಲ ಪಾಳೆಯದ ಹೊರಗೆ, ವೇದಿಕೆಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕರುಳುಗಳಲ್ಲಿರುವ ಕಲ್ಮಶ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಕಟ್ಟಿಗೆಯ ಮೇಲಿರಿಸಿ ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಎಂದರೆ ಇಡೀ ಹೋರಿಯನ್ನು ಪಾಳೆಯದ ಹೊರಗೆ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು, ಕಟ್ಟಿಗೆಯ ಮೇಲೆ ಬೆಂಕಿಯಿಂದ ಅದನ್ನು ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:12
16 ತಿಳಿವುಗಳ ಹೋಲಿಕೆ  

ಪ್ರಧಾನಯಾಜಕನು ಪಾಪಪರಿಹಾರಕ ಬಲಿಗಾಗಿ ಯಾವ ಪ್ರಾಣಿಗಳ ರಕ್ತವನ್ನು ಗರ್ಭಗುಡಿಗೆ ತರುತ್ತಾನೋ ಆ ಪ್ರಾಣಿಗಳ ದೇಹವನ್ನು ಪಾಳೆಯದಾಚೆ ಸುಡುವುದುಂಟು.


ಹೋರಿಯ ಮಾಂಸವನ್ನು, ಚರ್ಮವನ್ನು ಹಾಗು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ಪಾಪಪರಿಹಾರಕ ಬಲಿದಾನ.


ದೋಷಪರಿಹಾರಕ ಬಲಿಪ್ರಾಣಿಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ದೇಹಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು.


ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲೇ ದಹಿಸಿಬಿಡಬೇಕು.


ಅದನ್ನು ನೀವು ಯಾಜಕ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಆತ ಅದನ್ನು ಪಾಳೆಯದ ಹೊರಗೆ ಹೊಡೆಸಿಕೊಂಡು ಹೋಗಿ ತನಗೆದುರಾಗಿಯೇ ಒಬ್ಬನ ಕೈಯಿಂದ ವಧೆ ಮಾಡಿಸಬೇಕು.


ಆಗ ಸರ್ವೇಶ್ವರ ಮೋಶೆಗೆ, “ಆ ಮನುಷ್ಯನಿಗೆ ಮರಣ ಶಿಕ್ಷೆಯಾಗಬೇಕು. ಜನಸಮೂಹದವರೆಲ್ಲ ಅವನನ್ನು ಪಾಳೆಯದ ಹೊರಗೆ ಕಲ್ಲೆಸೆದು ಕೊಲ್ಲಬೇಕು,” ಎಂದು ಆಜ್ಞಾಪಿಸಿದರು.


ಅಂಥವರು ಗಂಡಸರೇ ಆಗಿರಲಿ, ಹೆಂಗಸರೇ ಆಗಿರಲಿ, ಅವರೆಲ್ಲರನ್ನು ಪಾಳೆಯದಿಂದ ಹೊರಡಿಸಬೇಕು. ನಾನೇ ವಾಸವಾಗಿರುವ ಪಾಳೆಯವನ್ನು ಅವರು ಅಪವಿತ್ರಗೊಳಿಸಬಾರದು.


ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸ ಪಾಳೆಯದ ಹೊರಗೆ ಇರಬೇಕು.


ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟಂತೆಯೇ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮಾಜದ ದೋಷಪರಿಹಾರಕ ಬಲಿ.


ಆದರೆ ದೋಷಪರಿಹಾರಕ ಬಲಿಪ್ರಾಣಿಗಳಲ್ಲಿ ಯಾವ ಪ್ರಾಣಿಯ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತರಲಾಗಿದೆಯೋ ಅದರ ಮಾಂಸವನ್ನು ತಿನ್ನಲೇಬಾರದು; ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಸರ್ವೇಶ್ವರನ ಆಜ್ಞಾನುಸಾರ ಆ ಪ್ರಾಣಿಯ ಮಿಕ್ಕ ಭಾಗಗಳನ್ನು, ಅಂದರೆ ಅದರ ಚರ್ಮ, ಮಾಂಸ ಹಾಗು ಕಲ್ಮಷಗಳನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.


ಅದರ ಮಾಂಸವನ್ನೂ ಚರ್ಮವನ್ನೂಪಾಳೆಯದ ಹೊರಗೆ ಬೆಂಕಿಯಲ್ಲಿ ಸುಡಿಸಿಬಿಟ್ಟನು.


ದೋಷಪರಿಹಾರಕ ಬಲಿಗಾಗಿ ವಧಿತವಾದ ಹೋರಿಯನ್ನು ಒಪ್ಪಿಸಿದಾಗ ಪವಿತ್ರಾಲಯದ ಹೊರಗೆ, ದೇವಸ್ಥಾನಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ, ಅದನ್ನು ಸುಡಬೇಕು.


ಅಂಥವರು ಆಯಾ ವಸ್ತುಗಳನ್ನು, ಅಂದರೆ ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು, ತಮ್ಮ ವಶಕ್ಕೆ ತೆಗೆದುಕೊಂಡದ್ದನ್ನು ಪೂರ್ತಿಯಾಗಿ ಹಿಂದಕ್ಕೆ ತಂದುಕೊಡಬೇಕು. ಅದೂ ಅಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಸೇರಿಸಿಕೊಡಬೇಕು. ಅವರು ಪರಿಹಾರ ಮಾಡುವ ದಿನದಲ್ಲೆ ಅದನ್ನು ಅದರ ನಿಜವಾದ ಒಡೆಯನಿಗೆ ಹಿಂದಕ್ಕೆ ಕೊಡಬೇಕು.


“ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯ ದ್ರವ್ಯಗಳನ್ನು ನಿಶ್ಯೇಷವಾಗಿ ಹೋಮಮಾಡಿ ಬಿಡಬೇಕು; ಅದನ್ನು ತಿನ್ನಲೇಕೂಡದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು