Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:20 - ಕನ್ನಡ ಸತ್ಯವೇದವು C.L. Bible (BSI)

20 ಅಭಿಷಿಕ್ತ ಯಾಜಕನು ದೋಷಪರಿಹಾರಕ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲಾಯಿತೋ ಹಾಗೆಯೆ ಇದರ ವಿಷಯದಲ್ಲೂ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದ ನಂತರ ಅವರಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು [ಅಭಿಷಿಕ್ತ ಯಾಜಕನ] ದೋಷಪರಿಹಾರಕಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:20
28 ತಿಳಿವುಗಳ ಹೋಲಿಕೆ  

ಹೀಗೆ ಯಾಜಕನು ಇಸ್ರಯೇಲರ ಸರ್ವಸಮೂಹದವರ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆ ದೊರಕುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದರ ಪರಿಹಾರಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿಯನ್ನೂ ದೋಷಪರಿಹಾರಕಬಲಿಯನ್ನೂ ಅರ್ಪಿಸಿದ್ದರಿಂದ ಕ್ಷಮೆ ಲಭಿಸುವುದು.


ಬಡತನದ ನಿಮಿತ್ತ ಕುರಿಯನ್ನು ಕೊಡುವುದಕ್ಕೆ ಆಗದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿಪಾರಿವಾಳಗಳನ್ನಾಗಲಿ ತಂದು ದಹನಬಲಿಗಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಒಂದನ್ನು ಸಮರ್ಪಿಸಬೇಕು. ಯಾಜಕನು ಅವಳ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಆಕೆ ಶುದ್ಧಳಾಗುವಳು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ತಿಳಿಯದೆ ತಪ್ಪುಮಾಡಿದ ಅಂಥವನ ಪರವಾಗಿ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ವಿಧಿಯನ್ನು ನೆರವೇರಿಸಿದರೆ ಅವನಿಗೆ ಕ್ಷಮೆ ದೊರಕುವುದು.


ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನು ಶುದ್ಧ ಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.


ಯಾಜಕನು ಅವರಿಗೋಸ್ಕರ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವರು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾದರೋ ಆ ವಿಷಯದಲ್ಲಿ ಅವರಿಗೆ ಕ್ಷಮೆ ದೊರಕುವುದು.”


ಇಂಥ ದೋಷದ ಪ್ರಾಯಶ್ಚಿತ್ತಕ್ಕಾಗಿ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


ಶಾಂತಿಸಮಾಧಾನದ ಬಲಿಪ್ರಾಣಿಯ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಅರ್ಪಿಸುವವನು ಆ ಪ್ರಾಣಿಯ ತಲೆಯ ಮೇಲೆ ಕೈಯಿಡಬೇಕು. ಆಗ ಅದು ಅವನ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಅಂಗೀಕೃತವಾಗುವುದು.


ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು. ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು.


ಆ ದೋಷಪರಿಹಾರಕ ಬಲಿಹೋರಿಯ ಕೊಬ್ಬನ್ನೆಲ್ಲಾ, ಅಂದರೆ ಕರುಳ ಸುತ್ತಲಿನ ಕೊಬ್ಬನ್ನೂ


ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟಂತೆಯೇ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮಾಜದ ದೋಷಪರಿಹಾರಕ ಬಲಿ.


ಶಾಂತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಬಲಿಪೀಠದಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಸರ್ವೇಶ್ವರನಿಗೆ ಹೋಮಮಾಡಲಿ. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಮತ್ತೊಂದನ್ನು ವಿಧಿಯಾನುಸಾರ ದಹನಬಲಿ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.


ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.”


ತಾವು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪರಿಹಾರಾರ್ಥವಾಗಿ ತಂದ ಟಗರಿನಿಂದ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದಾಗ ಅವರಿಗೆ ಕ್ಷಮೆ ದೊರಕುವುದು.


ಅಂಥವರು ಪರಿಹಾರಕ್ಕಾಗಿ ಹಿಂಡಿನಿಂದ ಕಳಂಕರಹಿತವಾದ ಟಗರೊಂದನ್ನು ಅಥವಾ ಅದಕ್ಕೆ ಸರಿಸಮಾನವಾದುದನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವರು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಬೇಕು. ಆಗ ಅವರಿಗೆ ಕ್ಷಮೆ ದೊರಕುವುದು.


ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.


ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಿ ಅವನ ಪರವಾಗಿ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು