Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:24 - ಕನ್ನಡ ಸತ್ಯವೇದವು C.L. Bible (BSI)

24 ಅವನು ಆ ಹೋತದ ತಲೆಯ ಮೇಲೆ ಕೈಯಿಟ್ಟು ಸರ್ವೇಶ್ವರನ ಸನ್ನಿಧಿಯಲ್ಲಿ, ದಹನ ಬಲಿಪ್ರಾಣಿಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು ಆ ಹೋತದ ತಲೆಯ ಮೇಲೆ ಕೈಯಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕಯಜ್ಞ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಧಿಪತಿಯು ತನ್ನ ಕೈಯನ್ನು ಹೋತದ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮ ಪಶುಗಳನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪಪರಿಹಾರಕ ಯಜ್ಞವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ತನ್ನ ಕೈಯನ್ನು ಆ ಹೋತದ ತಲೆಯ ಮೇಲೆ ಇಟ್ಟು, ಯೆಹೋವ ದೇವರ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:24
17 ತಿಳಿವುಗಳ ಹೋಲಿಕೆ  

ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ತರುವಾಯ ಅವನು ಜನರ ಪರವಾಗಿ ದೋಷಪರಿಹಾರಕ ಬಲಿಯ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿಮುಕಿಸಬೇಕು.


ದಹನ ಬಲಿಪ್ರಾಣಿಯನ್ನು ವಧಿಸಿದ ಸ್ಥಳದಲ್ಲೇ ಈ ಪ್ರಾಯಶ್ಚಿತ್ತ ಬಲಿಪ್ರಾಣಿಯನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.


“ನೀನು ಆರೋನನಿಗೂ ಅವನ ವಂಶಜರಿಗೂ ದೋಷಪರಿಹಾರಕ ಬಲಿ ನಿಯಮಗಳ ಬಗ್ಗೆ ಹೀಗೆ ಆಜ್ಞಾಪಿಸು: ದಹನ ಬಲಿಪ್ರಾಣಿಯನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಬಲಿಪ್ರಾಣಿಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ವಧಿಸಬೇಕು.


ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಿಗೆ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.


ದೇವದರ್ಶನದ ಗುಡಾರದ ಎದುರಿಗೆ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.


ಅವನು ಆ ಪ್ರಾಣಿಯನ್ನು ಸರ್ವೇಶ್ವರನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಡಬೇಕು; ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿಪೀಠದ ಉತ್ತರದ ಕಡೆ ವಧಿಸಲಿ. ತರುವಾಯ ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಲಿ.


ಅವನು ಅದನ್ನು ಸರ್ವೇಶ್ವರನ ಎದುರಿನಲ್ಲಿ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಬಲಿಪೀಠದ ಮೇಲೆ ಅನುದಿನವೂ ಸಮರ್ಪಿಸಬೇಕಾದುವುಗಳು ಇವು: ಒಂದು ವರ್ಷದ ಎರಡು ಕುರಿಗಳನ್ನು ದಿನಂಪ್ರತಿ ಬಲಿದಾನ ಮಾಡಬೇಕು.


ದೋಷಪರಿಹಾರಕ ಬಲಿಪ್ರಾಣಿಯನ್ನೂ ದಹನ ಬಲಿಪ್ರಾಣಿಯನ್ನೂ ವಧಿಸುವ ಸ್ಥಳದಲ್ಲೇ, ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರನ್ನು ವಧಿಸಬೇಕು. ಏಕೆಂದರೆ ದೋಷಪರಿಹಾರಕ ಬಲಿದ್ರವ್ಯದಂತೆಯೇ ಪ್ರಾಯಶ್ಚಿತ್ತ ಬಲಿದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು;


ಅಪರಾಧಪ್ರಾಯಶ್ಚಿತ್ತಕ್ಕಾಗಿ ಹಾಗು ದೋಷಪರಿಹಾರಕ್ಕಾಗಿ ತರಲಾದ ಹಣ ಯಾಜಕರ ಭಾಗವಾಗಿತ್ತು. ಅದು ಸರ್ವೇಶ್ವರನ ಆಲಯಕ್ಕೆ ಸೇರುತ್ತಿರಲಿಲ್ಲ.


ಅರ್ಪಿಸುವವನು ಆ ಪ್ರಾಣಿಯ ತಲೆಯ ಮೇಲೆ ಕೈಯಿಡಬೇಕು. ಆಗ ಅದು ಅವನ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಅಂಗೀಕೃತವಾಗುವುದು.


ಆರೋನನ ವಂಶಜರಾದ ಗಂಡಸರೆಲ್ಲರು ಅದನ್ನು ತಿನ್ನಬಹುದು. ಸರ್ವೇಶ್ವರನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ಶಾಶ್ವತ ನಿಯಮವಾಗಿ ಆರೋನನ ಸಂತತಿಗೆ ಸಲ್ಲತಕ್ಕದು. ಆ ದ್ರವ್ಯಗಳಿಗೆ ಸೋಂಕಿದೆಲ್ಲವೂ ಪರಿಶುದ್ಧವಾಗುವುದು.


ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತ ಯಾಜಕಪಟ್ಟಕ್ಕೆ ಬರುತ್ತಾನೋ ಅವನೇ ಅದನ್ನು ಸಮರ್ಪಿಸಬೇಕು. ಇದು ಶಾಶ್ವತ ನಿಯಮ.


ಕಡೆಯಲ್ಲಿ ದೋಷಪರಿಹಾರಕ ಬಲಿಗಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಸಮಾಜದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನು ಚಾಚಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು