Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:31 - ಕನ್ನಡ ಸತ್ಯವೇದವು C.L. Bible (BSI)

31 ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋ‍ಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಸಮಾಧಾನಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:31
39 ತಿಳಿವುಗಳ ಹೋಲಿಕೆ  

ಶಾಂತಿಸಮಾಧಾನದ ಬಲಿಪ್ರಾಣಿಯ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಶಾಂತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಬಲಿಪೀಠದಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಸರ್ವೇಶ್ವರನಿಗೆ ಹೋಮಮಾಡಲಿ. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅದನ್ನೆಲ್ಲಾ ಬಲಿಪೀಠದ ಮೇಲೆ ಸರ್ವೇಶ್ವರನಾದ ನನಗೆ ದಹನಬಲಿಯಾಗಿ ಸಮರ್ಪಿಸು. ಇದು ನನಗೆ ಪ್ರಿಯವಾದ ಸುಗಂಧ.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ತಾವು ಪುನೀತಗೊಳಿಸಿದವರನ್ನು ಒಂದೇ ಒಂದು ಬಲಿಯರ್ಪಣೆಯಿಂದ ಯೇಸು ನಿರಂತರ ಸಿದ್ಧಿಗೆ ತಂದಿದ್ದಾರೆ.


ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಸರ್ವೇಶ್ವರ ಮುಕ್ತಿದಾತನಾದುದರಿಂದ ಧರ್ಮಶಾಸ್ತ್ರಕ್ಕೆ ಮಹಿಮೆಯಿತ್ತು ಅದನ್ನು ಮಹತ್ತಾಗಿಸಿದ.


ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.


ಅವರಾದರೋ ಪರಲೋಕ ದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಿಂದ ತೊಳೆಯಿಸಿ ಆ ಟಗರನ್ನು ಬಲಿಪೀಠದ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿಯಾಯಿತು.


ಮಿಕ್ಕದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಬುಡದಲ್ಲಿ ಸುರಿದುಬಿಡಬೇಕು.


ಯಾಜಕನು ಆ ಹಕ್ಕಿಯ ದೇಹವನ್ನು ಇಬ್ಭಾಗವಾಗಿ ಸೀಳಲಿ; ಒಂದೊಂದು ಭಾಗದಲ್ಲಿ ಒಂದು ರೆಕ್ಕೆ ಇರುವಂತೆ ಸೀಳಲಿ. ಅನಂತರ ಅದನ್ನು ಬಲಿಪೀಠದ ಮೇಲಿನ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಲಿ. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಯಾಜಕನು ಆ ಎಣ್ಣೆ ಬೆರಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಹಾಗು ಇಡೀ ಸಾಂಬ್ರಾಣಿಯನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.


ಯಾಜಕನು ಅದು ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪ ಭಾಗವನ್ನು ಪ್ರತ್ಯೇಕಿಸಿ ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.


ಇಂಥ ದೋಷದ ಪ್ರಾಯಶ್ಚಿತ್ತಕ್ಕಾಗಿ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


ಮತ್ತೊಂದನ್ನು ವಿಧಿಯಾನುಸಾರ ದಹನಬಲಿ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.


ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನು ಶುದ್ಧ ಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.


ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.


ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಿ ಅವನ ಪರವಾಗಿ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.


ಹೀಗೆ ಯಾಜಕನು ಇಸ್ರಯೇಲರ ಸರ್ವಸಮೂಹದವರ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆ ದೊರಕುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದರ ಪರಿಹಾರಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿಯನ್ನೂ ದೋಷಪರಿಹಾರಕಬಲಿಯನ್ನೂ ಅರ್ಪಿಸಿದ್ದರಿಂದ ಕ್ಷಮೆ ಲಭಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು