Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:10 - ಕನ್ನಡ ಸತ್ಯವೇದವು C.L. Bible (BSI)

10 ಮತ್ತೊಂದನ್ನು ವಿಧಿಯಾನುಸಾರ ದಹನಬಲಿ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮತ್ತೊಂದನ್ನು ಯಥಾವಿಧಿಯಾಗಿ ಸರ್ವಾಂಗಹೋಮ ಮಾಡಿಬಿಡಬೇಕು. ಅವನ ತಪ್ಪಿನ ನಿವಿುತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತರುವಾಯ ಯಾಜಕನು ಎರಡನೆಯ ಪಕ್ಷಿಯನ್ನು ಸರ್ವಾಂಗಹೋಮದ ವಿಧಿಗಳಿಗನುಸಾರವಾಗಿ ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಅವನನ್ನು ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ಕ್ರಮದ ಪ್ರಕಾರ, ಎರಡನೆಯದನ್ನು ದಹನಬಲಿಯಾಗಿ ಸಮರ್ಪಿಸಬೇಕು. ಯಾಜಕನು ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:10
12 ತಿಳಿವುಗಳ ಹೋಲಿಕೆ  

ಶಾಂತಿಸಮಾಧಾನದ ಬಲಿಪ್ರಾಣಿಯ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಅಭಿಷಿಕ್ತ ಯಾಜಕನು ದೋಷಪರಿಹಾರಕ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲಾಯಿತೋ ಹಾಗೆಯೆ ಇದರ ವಿಷಯದಲ್ಲೂ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದ ನಂತರ ಅವರಿಗೆ ಕ್ಷಮಾಪಣೆಯಾಗುವುದು.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.


ತಾವು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪರಿಹಾರಾರ್ಥವಾಗಿ ತಂದ ಟಗರಿನಿಂದ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದಾಗ ಅವರಿಗೆ ಕ್ಷಮೆ ದೊರಕುವುದು.


ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.”


ಶಾಂತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಬಲಿಪೀಠದಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಸರ್ವೇಶ್ವರನಿಗೆ ಹೋಮಮಾಡಲಿ. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋ‍ಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಇಂಥ ದೋಷದ ಪ್ರಾಯಶ್ಚಿತ್ತಕ್ಕಾಗಿ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು