11 “ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿ ಪಾರಿವಾಳಗಳನ್ನಾಗಲಿ ಕೊಡಲು ಅವನಿಂದ ಆಗದೆ ಹೋದಲ್ಲಿ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿ ಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆ ಹೊಯ್ಯಕೂಡದು, ಸಾಂಬ್ರಾಣಿಯನ್ನು ಇಡಕೂಡದು.
11 “‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.
11 ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವದಕ್ಕೂ ಗತಿಯಿಲ್ಲದೆ ಹೋದರೆ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಕೂಡದು, ಧೂಪವನ್ನು ಇಡಕೂಡದು.
11 “ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅವನು ಶಕ್ತನಾಗಿಲ್ಲದಿದ್ದರೆ, ಆಗ ಅವನು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ತರಬೇಕು. ಇದು ಅವನ ಪಾಪಪರಿಹಾರಕ ಯಜ್ಞವಾಗಿರುವುದು. ಅವನು ಹಿಟ್ಟಿಗೆ ಎಣ್ಣೆಯನ್ನು ಹಾಕಬಾರದು. ಅವನು ಅದರ ಮೇಲೆ ಸುಗಂಧ ಧೂಪವನ್ನು ಇಡಬಾರದು, ಯಾಕೆಂದರೆ ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.
11 “ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.
ಈ ಎರಡು ಸಂದರ್ಭಗಳಲ್ಲೂ ಆ ಗಂಡನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ, ಅವನು ಯಾಜಕನಿಗೆ ಮೂರು ಸೇರು ಜವೆಗೋದಿ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಪಾಪವನ್ನು ಹೊರಪಡಿಸುವುದಕ್ಕೂ, ಸರ್ವೇಶ್ವರನಿಗೆ ನೈವೇದ್ಯವಾದ ಕಾಣಿಕೆ. ಆದ್ದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹುಯ್ಯಬಾರದು, ಸಾಂಬ್ರಾಣಿಯನ್ನು ಹಾಕಬಾರದು.
ಅವನು ತಂದ ಕಾಣಿಕೆಗಳು: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಬೆಳ್ಳಿಯ ಒಂದು ಹರಿವಾಣ; 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
ಅವನು ಯಾಜಕನ ಬಳಿಗೆ ಅದನ್ನು ತಂದ ನಂತರ ಅದು ದೇವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಸರ್ವೇಶ್ವರನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಬಲಿಪೀಠದಲ್ಲಿ ಹೋಮಮಾಡಬೇಕು. ಅದು ದೋಷಪರಿಹಾರಕ ಬಲಿ.
“ಆರೋನನಿಗೆ ಅಭಿಷೇಕವಾದ ದಿನ ಮೊದಲ್ಗೊಂಡು ಅವನೂ ಅವನ ವಂಶಜರೂ ಸರ್ವೇಶ್ವರನಿಗೆ ಸಮರ್ಪಿಸಬೇಕಾದ ಧಾನ್ಯನೈವೇದ್ಯದ ಕ್ರಮ ಇದು: ಅವರು ದಿನನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಬೆಳಿಗ್ಗೆ ಅರ್ಧ, ಸಂಜೆ ಅರ್ಧ, ಸಮರ್ಪಿಸಬೇಕು.
ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಅಶಕ್ತನಾಗಿದ್ದರೆ ಪ್ರಾಯಶ್ಚಿತ್ತ ಬಲಿಗಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳಲು (ಯಾಜಕನ ಕೈಯಿಂದ) ನೈವೇದ್ಯವಾಗಿ ಆರತಿಯೆತ್ತಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂದು ಕಿಲೋಗ್ರಾಂ ಗೋಧಿ ಹಿಟ್ಟನ್ನೂ ಸುಮಾರು ಕಾಲು ಲೀಟರ್ ಎಣ್ಣೆಯನ್ನೂ ತರಬೇಕು.
ಯಾವನಾದರು ಬಡವನಾಗಿದ್ದು ನೇಮಕವಾದ ನಾಣ್ಯವನ್ನು ಕೊಡಲಾಗದೆ ಹೋದರೆ ಅವನು ಹರಕೆ ಮಾಡಿ ಪ್ರತಿಷ್ಠಿಸಿದ ವ್ಯಕ್ತಿಯನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆ ಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ತೆರಬೇಕಾದ ನಾಣ್ಯ ಇಷ್ಟೆಂದು ನಿಗದಿ ಮಾಡಬೇಕು.
ಬಡತನದ ನಿಮಿತ್ತ ಕುರಿಯನ್ನು ಕೊಡುವುದಕ್ಕೆ ಆಗದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿಪಾರಿವಾಳಗಳನ್ನಾಗಲಿ ತಂದು ದಹನಬಲಿಗಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಒಂದನ್ನು ಸಮರ್ಪಿಸಬೇಕು. ಯಾಜಕನು ಅವಳ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಆಕೆ ಶುದ್ಧಳಾಗುವಳು.