ಯಾಜಕಕಾಂಡ 5:16 - ಕನ್ನಡ ಸತ್ಯವೇದವು C.L. Bible (BSI)16 ತಾವು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪರಿಹಾರಾರ್ಥವಾಗಿ ತಂದ ಟಗರಿನಿಂದ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದಾಗ ಅವರಿಗೆ ಕ್ಷಮೆ ದೊರಕುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮತ್ತು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ವ್ಯಕ್ತಿಯೂ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮಾಡಿದ ಪಾಪಕ್ಕಾಗಿ ಈ ಬೆಲೆಯನ್ನು ತೆರಬೇಕು. ಇದಲ್ಲದೆ ಆ ಬೆಲೆಯ ಐದನೆಯ ಒಂದು ಭಾಗವನ್ನು ಸೇರಿಸಿ ಆ ಹಣವನ್ನು ಯಾಜಕನಿಗೆ ಕೊಡಬೇಕು. ಈ ರೀತಿಯಾಗಿ ಯಾಜಕನು ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವುದರ ಮೂಲಕ ಅವನನ್ನು ಶುದ್ಧಿಮಾಡುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಪರಿಶುದ್ಧವಾದದ್ದಲ್ಲದೆ, ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅದಕ್ಕೆ ಐದನೆಯ ಪಾಲನ್ನು ಕೂಡಿಸಿ, ಅದನ್ನು ಯಾಜಕನಿಗೆ ಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು,” ಎಂದನು. ಅಧ್ಯಾಯವನ್ನು ನೋಡಿ |