Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:2 - ಕನ್ನಡ ಸತ್ಯವೇದವು C.L. Bible (BSI)

2 “ಒಬ್ಬನಿಗೆ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವಾಗಲಿ, ಬೇರೆ ಯಾವ ಅಶುದ್ಧ ವಸ್ತುವಾಗಲಿ ತಗಲಿದರೆ, ಅವನಿಗೆ ತಿಳಿಯದೆ ಹೋದರೂ, ಅವನು ಅಶುದ್ಧನೂ ದೋಷಿಯೂ ಆಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವಾಗಲಿ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ ಅವನಿಗೆ ತಿಳಿಯದೆಹೋದರೂ ಅವನು ಅಶುದ್ಧನೂ ದೋಷಿಯೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯಾವನಾದರೂ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವನ್ನಾಗಲಿ ಅಥವಾ ಬೇರೆ ಯಾವ ಅಶುದ್ಧ ವಸ್ತುವನ್ನಾಗಲಿ ಮುಟ್ಟಿದರೆ ತಾನು ಮುಟ್ಟಿದ್ದು ತಿಳಿಯದಿದ್ದರೂ ಅವನು ಅಶುದ್ಧನೂ ದೋಷಿಯೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ ‘ಇಲ್ಲವೆ, ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಇವುಗಳ ಹೆಣವಾಗಲಿ, ಅಶುದ್ಧವಾದ ಹರಿದಾಡುವ ಕ್ರಿಮಿಗಳ ಹೆಣಗಳಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ ಅವನಿಗೆ ತಿಳಿಯದೆ ಇದ್ದರೂ ಅವನು ಅಶುದ್ಧವಾಗಿದ್ದು ಅಪರಾಧಿಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:2
16 ತಿಳಿವುಗಳ ಹೋಲಿಕೆ  

“ನಿಮ್ಮಲ್ಲಿ ಯಾರಾದರು ಸರ್ವೇಶ್ವರನು ವಿಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ಮಾಡಿ ದೋಷಕ್ಕೆ ಒಳಗಾದರೆ, ಅದು ಅವರಿಗೆ ತಿಳಿಯದೆ ಹೋದರೂ, ಅವರು ಅದರಿಂದ ಅಪರಾಧಿಯಾಗಿ ತಮ್ಮ ಪಾಪಫಲವನ್ನು ಅನುಭವಿಸಬೇಕು.


ಹಂದಿಯ ಗೊರಸು ಸೀಳಿದ್ದರೂ ಅದು ಮೆಲುಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಕೂಡದು; ಇವುಗಳ ಹೆಣವನ್ನು ಮುಟ್ಟಕೂಡದು.


ಆಗ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರೂ ಸೋಕಿದರೆ ಅದು ಅಶುದ್ಧವಾಗುತ್ತದೋ” ಎಂದು ಕೇಳಿದನು. ಅದಕ್ಕೆ ಯಾಜಕರು: “ಖಂಡಿತವಾಗಿ ಅಶುದ್ಧವಾಗುತ್ತದೆ” ಎಂದು ಉತ್ತರಕೊಟ್ಟರು.


ಅಂಥವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಹೇಯವಾಗಿರಬೇಕು.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ಅಯ್ಯೋ, ನಿಮಗೆ ಧಿಕ್ಕಾರ! ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ,” ಎಂದರು.


ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.


ತನ್ನ ತಪ್ಪನು ತಾನರಿತುಕೊಳ್ಳುವವನಾರಯ್ಯಾ I ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ II


“ಯಾರಾದರು ಅಶುದ್ಧರಾಗಿದ್ದು ಸರ್ವೇಶ್ವರನಿಗೆ ಸಮರ್ಪಿತವಾದ ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸವನ್ನು ತಿಂದರೆ ಅಂಥವರನ್ನು ತಮ್ಮ ಕುಲದಿಂದ ತೆಗೆದುಹಾಕಬೇಕು.


“ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.


“ಇಸ್ರಯೇಲರ ಸಮಾಜವೆಲ್ಲ ತಿಳಿಯದೆ ದೋಷಿಗಳಾದರೆ, ಅಂದರೆ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರು ಮಾಡಿ ದೋಷಕ್ಕೆ ಗುರಿಯಾದರೆ,


“ಮನುಷ್ಯ ದೇಹದಿಂದುಂಟಾದ ಯಾವುದಾದರು ಒಂದು ಅಶುದ್ಧ ವಸ್ತು ತಗುಲಿದ್ದು, ಅವನಿಗೆ ತಿಳಿಯದೆ ಹೋದರೂ, ತಿಳಿದು ಬಂದಾಗ ಅವನು ದೋಷಿಯಾಗುತ್ತಾನೆ.


ಇಂಥವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣವನ್ನು ಮುಟ್ಟಬಾದರು. ಅವುಗಳನ್ನು ಅಶುದ್ಧವೆಂದೆಣಿಸಬೇಕು.


ಮಡಿಗೆಟ್ಟವನಿಗೆ ಸೋಂಕಿದ ಬಟ್ಟೆ ಯಾವುದೇ ಆಗಲಿ ಮೈಲಿಗೆಯಾದುದೆಂದು ನೀವು ತಿಳದುಕೊಳ್ಳಬೇಕು. ಅದು ಯಾರಿಗೆ ಸೋಂಕಿತೋ ಅವನು ಕೂಡ ಆ ದಿನದ ಸಂಜೆಯವರೆಗೆ ಮಡಿಗೆಟ್ಟವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು