Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:5 - ಕನ್ನಡ ಸತ್ಯವೇದವು C.L. Bible (BSI)

5 “ಈ ವಿಷಯಗಳಲ್ಲಿ ಯಾರಾದರು ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಈ ವಿಷಯಗಳಲ್ಲಿ ಯಾವದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ವಿಷಯಗಳಲ್ಲಿ ಯಾವುದಾದರೊಂದರಲ್ಲಿ ದೋಷಿಯಾದರೆ, ಅವನು ತನ್ನ ತಪ್ಪನ್ನು ಒಪ್ಪಿಕೊಂಡು ಅರಿಕೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಇವುಗಳೊಂದರಲ್ಲಿ ಅಪರಾಧಿಯಾಗಿದ್ದು, ತಾನು ಅದರಲ್ಲಿ ಪಾಪಮಾಡಿದ್ದೇನೆಂದು ಅರಿಕೆ ಮಾಡುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:5
13 ತಿಳಿವುಗಳ ಹೋಲಿಕೆ  

ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಅವರು ತಮ್ಮ ಅಪರಾಧವನ್ನು ಒಪ್ಪಿಕೊಳ್ಳಬೇಕು. ಅಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.


“ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪ ಮಾಡಿದವರೆಂದು ಒಪ್ಪಿಕೊಂಡು, ನನಗೆ ವಿರೋಧವಾಗಿ ನಡೆದದ್ದರಿಂದಲೇ


ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಯೇಲರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ, ಅಪರಾಧಗಳನ್ನೂ, ಸರ್ವೇಶ್ವರನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಮರುಭೂಮಿಗೆ ಕಳಿಸಿಬಿಡಬೇಕು.


ಹೌದು, ಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆ; ಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ.


ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು


ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ: “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು