Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:6 - ಕನ್ನಡ ಸತ್ಯವೇದವು C.L. Bible (BSI)

6 ಇಂಥ ದೋಷದ ಪ್ರಾಯಶ್ಚಿತ್ತಕ್ಕಾಗಿ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನು ದೋಷಪರಿಹಾರಕ್ಕಾಗಿ ಹೆಣ್ಣು ಕುರಿಮರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯಜ್ಞವಾಗಿ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:6
13 ತಿಳಿವುಗಳ ಹೋಲಿಕೆ  

ತನ್ನ ತಪ್ಪು ತನಗೆ ತಿಳಿದು ಬಂದಾಗ ದೋಷಪರಿಹಾರಕ್ಕಾಗಿ ಕಳಂಕರಹಿತವಾದ ಒಂದು ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.


ಅವನು ತನ್ನ ದೋಷಪರಿಹಾರಾರ್ಥವಾಗಿ ತರುವುದು ಒಂದು ಕುರಿಯಾದರೆ ಅದು ಕಳಂಕರಹಿತವಾದ ಹೆಣ್ಣಾಗಿರಬೇಕು.


ಆಗ ನನಗೆ, ‘ದೀಕ್ಷಿತರ ಪ್ರಾಕಾರದ ಉತ್ತರ ದಕ್ಷಿಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾದವು; ಅಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ, ಮತ್ತು ಧಾನ್ಯನೈವೇದ್ಯ ದೋಷಪರಿಹಾರಕಬಲಿದ್ರವ್ಯ, ಪ್ರಾಯಶ್ಚಿತ್ತಬಲಿದ್ರವ್ಯ ಎಂಬೀ ಮಹಾಪರಿಶುದ್ಧ ಪದಾರ್ಥಗಳನ್ನು ಅಲ್ಲಿಡುತ್ತಾರೆ. ಆ ಸ್ಥಳ ಪರಿಶುದ್ಧ.


ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲೂ ಎರಡೆರಡು ಪೀಠಗಳಿದ್ದವು. ಅವುಗಳ ಮೇಲೆ ದಹನಬಲಿಪ್ರಾಣಿ, ದೋಷಪರಿಹಾರಕ ಬಲಿಪ್ರಾಣಿ, ಪ್ರಾಯಶ್ಚಿತ್ತ ಬಲಿಪ್ರಾಣಿ, ಇವುಗಳನ್ನು ವಧಿಸುತ್ತಿದ್ದರು.


ಅವರು ಪರಿಹಾರಕ್ಕಾಗಿ, ತಮ್ಮ ಹಿಂಡಿನಿಂದ ಕಳಂಕರಹಿತವಾದ ಒಂದು ಟಗರನ್ನು ಅಥವಾ ಅದಕ್ಕೆ ಸರಿಸಮಾನವಾದುದ್ದನ್ನು ತಂದು ಯಾಜಕನಿಗೆ ಒಪ್ಪಿಸಬೇಕು.


ಅಭಿಷಿಕ್ತ ಯಾಜಕನು ದೋಷಪರಿಹಾರಕ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲಾಯಿತೋ ಹಾಗೆಯೆ ಇದರ ವಿಷಯದಲ್ಲೂ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದ ನಂತರ ಅವರಿಗೆ ಕ್ಷಮಾಪಣೆಯಾಗುವುದು.


ಅವನು ಎಷ್ಠು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಳ್ಳಬೇಕು. ಅದಲ್ಲದೆ ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ವ್ರತಕ್ಕೆ ವಿಘ್ನಪ್ರಾಪ್ತವಾದ್ದರಿಂದ ಕಳೆದುಹೋದ ದಿನಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.


ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ ಒಳಗಿನ ಪ್ರಾಕಾರಕ್ಕೆ ಬರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು; ಇದು ಸರ್ವೇಶ್ವರನಾದ ದೇವರ ನುಡಿ.


ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋ‍ಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಶಾಂತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಬಲಿಪೀಠದಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಸರ್ವೇಶ್ವರನಿಗೆ ಹೋಮಮಾಡಲಿ. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು