ಯಾಜಕಕಾಂಡ 6:15 - ಕನ್ನಡ ಸತ್ಯವೇದವು C.L. Bible (BSI)15 ಅವರಲ್ಲಿ ಒಬ್ಬನು ನೈವೇದ್ಯವಾದುದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನೂ ಅದರ ಮೇಲಿರುವ ಸಾಂಬ್ರಾಣಿಯೆಲ್ಲವನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟು ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವದಕ್ಕಾಗಿ ಎಣ್ಣೆ ಹೊಯಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನೂ ಅದರ ಮೇಲಿರುವ ಧೂಪವೆಲ್ಲವನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯಾಜಕನು ಧಾನ್ಯನೈವೇದ್ಯದಿಂದ ಒಂದು ಹಿಡಿ ಶ್ರೇಷ್ಠ ಹಿಟ್ಟನ್ನು ಮತ್ತು ಎಣ್ಣೆಯನ್ನು ಮತ್ತು ಎಲ್ಲಾ ಧೂಪವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಅದನ್ನು ವೇದಿಕೆಯ ಮೇಲೆ ಸುಡಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯಾಜಕನು ಧಾನ್ಯ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ, ಧಾನ್ಯ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ, ಅದರ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದುಕೊಂಡು ಜ್ಞಾಪಕಾರ್ಥವಾಗಿ ಯೆಹೋವ ದೇವರಿಗೆ ಬಲಿಪೀಠದ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು. ಅಧ್ಯಾಯವನ್ನು ನೋಡಿ |