Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:17 - ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರನಿಗೆ ಹೋಮ ರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಡಲಾಗಿದೆ. ಅದಕ್ಕೆ ಹುಳಿ ಕಲಸಿ ಸುಡಕೂಡದು. ದೋಷಪರಿಹಾರಕ ಬಲಿಯಂತೆ ಹಾಗು ಪ್ರಾಯಶ್ಚಿತ್ತ ಬಲಿದ್ರವ್ಯದಂತೆ ಅದು ಸಹ ಮಹಾಪರಿಶುದ್ಧವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದಕ್ಕೆ ಹುಳಿಕಲಸಿ ಸುಡಕೂಡದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹುಳಿಕಲಸಿ ರೊಟ್ಟಿ ಸುಡಬಾರದು. ನನಗೆ ಅಗ್ನಿಯ ಮೂಲಕ ಹೋಮವಾಗಿ ಅರ್ಪಿಸಿದ ಸಮರ್ಪಣೆಗಳಲ್ಲಿ ನಾನು ಅದನ್ನು ಯಾಜಕರ ಪಾಲನ್ನಾಗಿ ಕೊಟ್ಟಿದ್ದೇನೆ. ಅದು ಪಾಪಪರಿಹಾರಕ ಯಜ್ಞದಂತೆಯೂ ದೋಷಪರಿಹಾರಕ ಯಜ್ಞದಂತೆಯೂ ಮಹಾ ಪವಿತ್ರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ಅವರು ನನಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆಗಳಲ್ಲಿ ಅವರ ಪಾಲನ್ನು ಅವರಿಗೆ ನಾನು ಕೊಟ್ಟಿದ್ದೇನೆ. ಅದು ದೋಷಪರಿಹಾರದ ಬಲಿಯ ಹಾಗೆಯೂ ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:17
14 ತಿಳಿವುಗಳ ಹೋಲಿಕೆ  

“ನೀನು ಆರೋನನಿಗೂ ಅವನ ವಂಶಜರಿಗೂ ದೋಷಪರಿಹಾರಕ ಬಲಿ ನಿಯಮಗಳ ಬಗ್ಗೆ ಹೀಗೆ ಆಜ್ಞಾಪಿಸು: ದಹನ ಬಲಿಪ್ರಾಣಿಯನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಬಲಿಪ್ರಾಣಿಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ವಧಿಸಬೇಕು.


“ನೀವು ಸರ್ವೇಶ್ವರನಿಗೆ ಕಾಣಿಕೆಯಾಗಿ ಸಮರ್ಪಿಸುವ ಯಾವ ಧಾನ್ಯದ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಸರ್ವೇಶ್ವರನಿಗೆ ಹೋಮಮಾಡಕೂಡದು.


ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಯುವ ಹೋಮಶೇಷವು ಮಹಾಪರಿಶುದ್ಧವಾದುದು.


“ಪ್ರಾಯಶ್ಚಿತ್ತ ಬಲಿ ನಿಯಮಗಳು ಹೀಗಿವೆ: ಈ ಬಲಿ ಮಹಾಪರಿಶುದ್ಧವಾದುದು.


ಯಾಜಕರಲ್ಲಿ ಗಂಡಸರೆಲ್ಲರು ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದುದು.


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ಹೋಮ ಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರು ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರ ಸ್ಥಳದೊಳಗೇ ಅದನ್ನು ತಿನ್ನಬೇಕು.


ಬಲಿಪೀಠವನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಬಲಿಪೀಠವನ್ನು ಪ್ರತಿಷ್ಠಾಪಿಸು. ಅದು ಪರಮಪವಿತ್ರವಾಗಿರಬೇಕು.


ಹೀಗೆ ಏಳು ದಿನಗಳವರೆಗೆ ಬಲಿಪೀಠದ ನಿಮಿತ್ತ ಪಾಪಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪ್ರತಿಷ್ಠಾಪಿಸು. ಬಲಿಪೀಠವು ಅತಿಶುದ್ಧವಾಗಿರಬೇಕು. ಅದನ್ನು ಸೋಕಿದ್ದೆಲ್ಲವು ಪರಿಶುದ್ಧವಾಗುವುದು.


ಅದು ಮಹಾಪರಿಶುದ್ಧವಾದ್ದರಿಂದ ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಅದನ್ನು ಪವಿತ್ರ ಸ್ಥಳದೊಳಗೆ, ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಊಟಮಾಡಬೇಕು.


ಈ ಪ್ರಾಯಶ್ಚಿತ್ತ ಹಾಗು ದೋಷಪರಿಹಾರಕ ಬಲಿ ಹೋಮ ಶೇಷಗಳಿಗೆ ಇರುವ ವಿಧಿ ಒಂದೇ; ಈ ಹೋಮಶೇಷಗಳು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕವು.


ಜನರೆಲ್ಲರ ದೋಷಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಬಗ್ಗೆ ಅದು ಏನಾಯಿತೆಂದು ಮೋಶೆ ವಿಚಾರಿಸಿದಾಗ ಅದನ್ನು ಸುಟ್ಟುಬಿಟ್ಟರೆಂದು ತಿಳಿದುಬಂದಿತು. ಇದನ್ನು ಕೇಳಿ ಮೋಶೆ, ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು