ಯಾಜಕಕಾಂಡ 6:22 - ಕನ್ನಡ ಸತ್ಯವೇದವು C.L. Bible (BSI)22 ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತ ಯಾಜಕಪಟ್ಟಕ್ಕೆ ಬರುತ್ತಾನೋ ಅವನೇ ಅದನ್ನು ಸಮರ್ಪಿಸಬೇಕು. ಇದು ಶಾಶ್ವತ ನಿಯಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ನಿಶ್ಶೇಷವಾಗಿ ಹೋಮಮಾಡಿಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಆರೋನನ ಸ್ಥಾನವನ್ನು ಹೊಂದುವುದಕ್ಕಾಗಿ ಆರೋನನ ಸಂತತಿಯವರಲ್ಲಿ ಆರಿಸಲ್ಪಟ್ಟು ಅಭಿಷೇಕಿಸಲ್ಪಟ್ಟ ಯಾಜಕನು ಯೆಹೋವನಿಗೆ ಈ ಧಾನ್ಯಸಮರ್ಪಣೆ ಮಾಡಬೇಕು. ಈ ನಿಯಮ ಶಾಶ್ವತವಾದದ್ದು. ಧಾನ್ಯಸಮರ್ಪಣೆ ಸಂಪೂರ್ಣವಾಗಿ ಹೋಮವಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು. ಅಧ್ಯಾಯವನ್ನು ನೋಡಿ |