6 ಆ ವ್ಯಕ್ತಿ ದೋಷಪರಿಹಾರಕ ಯಜ್ಞವನ್ನು ಯಾಜಕನ ಬಳಿಗೆ ತರಬೇಕು. ಅದು ಮಂದೆಯಿಂದ ತಂದ ಟಗರಾಗಿರಬೇಕು. ಟಗರಿನಲ್ಲಿ ಯಾವ ದೋಷವೂ ಇರಬಾರದು. ಅದು ಯಾಜಕನು ಹೇಳುವ ಬೆಲೆಯುಳ್ಳದ್ದಾಗಿರಬೇಕು. ಅದು ಯೆಹೋವನಿಗೆ ಸಮರ್ಪಿಸುವ ದೋಷಪರಿಹಾರಕ ಯಜ್ಞವಾಗಿರುವುದು.
“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.
ಅಂಥವರು ಪರಿಹಾರಕ್ಕಾಗಿ ಹಿಂಡಿನಿಂದ ಕಳಂಕರಹಿತವಾದ ಟಗರೊಂದನ್ನು ಅಥವಾ ಅದಕ್ಕೆ ಸರಿಸಮಾನವಾದುದನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವರು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಬೇಕು. ಆಗ ಅವರಿಗೆ ಕ್ಷಮೆ ದೊರಕುವುದು.
“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.
ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಿ ಆ ಟಗರುಗಳಲ್ಲಿ ಒಂದನ್ನೂ ಆ ಒಂದು ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತ ಬಲಿಯಾಗಿ ಸಮರ್ಪಿಸಬೇಕು: ಅವುಗಳನ್ನು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು.
ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆ ಬಲಿಪೀಠದ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.