Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:13 - ಕನ್ನಡ ಸತ್ಯವೇದವು C.L. Bible (BSI)

13 ಅದೂ ಅಲ್ಲದೆ ಹುಳಿರೊಟ್ಟಿಗಳನ್ನು ಕೂಡ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೃತಜ್ಞತೆಯನ್ನು ತೋರಿಸುವದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಅರ್ಪಿಸುವ ಯಜ್ಞವೇ ಸಮಾಧಾನಯಜ್ಞವಾಗಿದೆ. ಈ ಯಜ್ಞದೊಡನೆ ಅವನು ಹುಳಿಯಿರುವ ರೊಟ್ಟಿಗಳ ನೈವೇದ್ಯವನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ರೊಟ್ಟಿಗಳಲ್ಲದೆ, ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಬಲಿಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:13
7 ತಿಳಿವುಗಳ ಹೋಲಿಕೆ  

ಹುಳಿಹಿಟ್ಟಿನ ರೊಟ್ಟಿಯನ್ನು ಹೋಮಮಾಡಿ ಉಪಕಾರಸ್ಮರಣೆ ಮಾಡಿಕೊಳ್ಳಿ. ಇಷ್ಟಬಂದಂತೆ ಕಾಣಿಕೆಗಳನ್ನು ಸಮರ್ಪಿಸಿ ಪ್ರಚಾರಮಾಡಿಕೊಳ್ಳಿ. ಹೀಗೆ ಮಾಡುವುದು ನಿಮಗೆ ಇಷ್ಟವಲ್ಲವೆ?” ಇದು ಸರ್ವೇಶ್ವರಸ್ವಾಮಿಯ ನುಡಿ.


ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಎರಡು ಕಿಲೋಗ್ರಾಂ ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದೇ. ಅವರಿಗೆ ಸ್ತುತಿಸಲ್ಲಿಸಿ ಸ್ವೀಕರಿಸಿದ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.


ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.”


ಅವುಗಳನ್ನು ಪ್ರಥಮ ಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬಹುದೇ ಹೊರತು ಬಲಿಪೀಠದ ಮೇಲೆ ಸುವಾಸನೆಯನ್ನುಂಟುಮಾಡುವುದಕ್ಕಾಗಿ ಹೋಮ ಮಾಡಕೂಡದು.


ಆ ರೊಟ್ಟಿಗಳೊಡನೆ ಒಂದು ವರ್ಷದ ಕಳಂಕರಹಿತವಾದ ಏಳು ಕುರಿಗಳನ್ನೂ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆಯೂ ಪಾನದ್ರವ್ಯದೊಡನೆಯೂ ಅಗ್ನಿ ಮೂಲಕ ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯನ್ನುಂಟುಮಾಡುವ ದಹನಬಲಿದಾನಗಳಾಗುವುವು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು