Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:18 - ಕನ್ನಡ ಸತ್ಯವೇದವು C.L. Bible (BSI)

18 ಆ ಬಲಿಪ್ರಾಣಿಯ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದ್ದೇ ಆದರೆ ಆ ಬಲಿ ಸ್ವೀಕೃತವಾಗುವುದಿಲ್ಲ. ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರಕುವುದಿಲ್ಲ. ಅದು ಹೇಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವೇ ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವದಿಲ್ಲ. ಅದು ಹೇಯವಾದದ್ದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಬ್ಬನು ತನ್ನ ಸಮಾಧಾನಯಜ್ಞದಲ್ಲಿ ಉಳಿದದ್ದನ್ನು ಮೂರನೆಯ ದಿನದಲ್ಲಿ ತಿಂದರೆ, ಯೆಹೋವನು ಅವನ ವಿಷಯದಲ್ಲಿ ಸಂತೋಷಗೊಳ್ಳುವುದಿಲ್ಲ. ಯೆಹೋವನು ಆ ಯಜ್ಞವನ್ನು ಅವನ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಆ ಯಜ್ಞವು ಅಸಹ್ಯವಸ್ತುವಾಗುವುದು. ಆ ಮಾಂಸವನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತನ್ನ ಸಮಾಧಾನ ಬಲಿಯ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಬಲಿಯಾಗುವುದಿಲ್ಲ, ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರುವುದಿಲ್ಲ. ಅದು ಅಶುಚಿಯಾಗಿರುವುದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:18
31 ತಿಳಿವುಗಳ ಹೋಲಿಕೆ  

ಹೀಗೆ ನೀವು ಸಮರ್ಪಿಸುವ ಹತ್ತನೆಯ ಪಾಲು, ಕಣದಲ್ಲಿನ ದವಸದಿಂದ ಹಾಗೂ ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಾಂಶವೆಂದು ಪರಿಗಣಿತವಾಗುವುದು.


ಅನ್ಯದೇಶದವನಿಂದ ತೆಗೆದುಕೊಂಡ ಅಂಥ ಪ್ರಾಣಿಯನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು. ಅದು ಕುಂದುಳ್ಳದ್ದು, ಕಳಂಕಿತವಾದದ್ದು. ಆದಕಾರಣ ಸ್ವೀಕೃತವಾಗದು.”


ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಹೇಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.


ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.


ಅಯ್ಯೋ, ಎಷ್ಟು ಬೇಸರವಾದುದು ಈ ಸೇವೆ’ ಎಂದುಕೊಂಡು ನೀವು ಅದನ್ನು ತಾತ್ಸಾರಮಾಡುತ್ತೀರಿ. “ಕಳವಿನ ಪಶುವನ್ನು, ರೋಗ ಹಿಡಿದ, ಊನವಾದ ಪ್ರಾಣಿಯನ್ನು ಅರ್ಪಿಸುತ್ತೀರಿ. ಇಂಥ ಕಾಣಿಕೆಯನ್ನು ನಿಮ್ಮ ಕೈಗಳಿಂದ ನಾನು ಸ್ವೀಕರಿಸಲೋ?’ ಎಂದು ಕೇಳುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ಪಾಪಮಾಡುವವನೇ ಸಾಯುವನು. ಮಗನು ತಂದೆಯ ದೋಷಫಲವನ್ನು ಅನುಭವಿಸನು; ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.


ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”


“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.


ಗೋರಿಗಳಲ್ಲಿ ಕುಳಿತುಕೊಳ್ಳುತ್ತಾರೆ, ಗುಪ್ತಸ್ಥಳಗಳಲ್ಲಿ ರಾತ್ರಿಯನ್ನು ಕಳೆಯುತ್ತಾರೆ, ಹಂದಿಯ ಮಾಂಸವನ್ನು ತಿನ್ನುತ್ತಾರೆ, ಅಸಹ್ಯ ಪದಾರ್ಥಗಳ ಸಾರವನ್ನು ತಟ್ಟೆಗಳಲ್ಲಿ ಬಡಿಸಿಕೊಳ್ಳುತ್ತಾರೆ.


ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸ್ವೀಕೃತವಾಗುವುದಿಲ್ಲ.


ಹಾಗೆ ಮಾಡಿದರೆ ತಾವು ಆ ನೈವೇದ್ಯಗಳನ್ನು ಊಟ ಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಗೆ ಗುರಿಯಾಗುವರು, ನನ್ನ ಸೇವೆಗೆ ಯಾಜಕರನ್ನು ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.


ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.


ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಹಾಗು ಸ್ನಾನಮಾಡಿಕೊಳ್ಳದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು.


ಅದಕ್ಕೆ ಆರೋನನು ಮೋಶೆಗೆ, “ಇವರು ಈ ದಿನ ಸರ್ವೇಶ್ವರನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಬಲಿಯನ್ನು ಹಾಗು ದಹನ ಬಲಿಯನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಲ್ಲಿ ನಾನು ದೋಷಪರಿಹಾರಕ ಬಲಿಮಾಂಸವನ್ನು ಈ ದಿನ ಊಟಮಾಡಿದ್ದರೆ ಅದು ಸರ್ವೇಶ್ವರನಿಗೆ ಸರಿದೋರುತ್ತಿತ್ತೆ?” ಎಂದು ಉತ್ತರಕೊಟ್ಟನು.


“ಆ ದೋಷಪರಿಹಾರಕ ಬಲಿ ಮಹಾಪರಿಶುದ್ಧವಾದುದಲ್ಲವೆ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆ, ಅವರ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷನಿವಾರಿಸುವಂತೆ, ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲವೆ? ಅದನ್ನೇಕೆ ನೀವು ಪರಿಶುದ್ಧ ಸ್ಥಳದಲ್ಲಿ ತಿನ್ನಲಿಲ್ಲ?


“ನಿಮ್ಮಲ್ಲಿ ಯಾರಾದರು ಸರ್ವೇಶ್ವರನು ವಿಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ಮಾಡಿ ದೋಷಕ್ಕೆ ಒಳಗಾದರೆ, ಅದು ಅವರಿಗೆ ತಿಳಿಯದೆ ಹೋದರೂ, ಅವರು ಅದರಿಂದ ಅಪರಾಧಿಯಾಗಿ ತಮ್ಮ ಪಾಪಫಲವನ್ನು ಅನುಭವಿಸಬೇಕು.


“ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


“ಶಾಂತಿಸಮಾಧಾನದ ಬಲಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸುವಾಗ ಅವರಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು