Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:25 - ಕನ್ನಡ ಸತ್ಯವೇದವು C.L. Bible (BSI)

25 ಜನರು ಸರ್ವೇಶ್ವರನಿಗೆ ಹೋಮ ಮಾಡುವಂಥ ಪ್ರಾಣಿಪಶುಗಳ ಕೊಬ್ಬನ್ನು ಯಾರಾದರು ತಿಂದರೆ ಅವರು ಕುಲದಿಂದ ಬಹಿಷ್ಕೃತರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮನುಷ್ಯನು ಯೆಹೋವನಿಗೆ ಹೋಮಮಾಡುವಂಥ ಪಶುಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯಾವನಾದರೂ ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾದ ಪಶುವಿನ ಕೊಬ್ಬನ್ನು ತಿಂದರೆ, ಅವನನ್ನು ಅವನ ಜನರಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಏಕೆಂದರೆ ಮನುಷ್ಯರು ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸಿದ ಬಲಿ, ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:25
8 ತಿಳಿವುಗಳ ಹೋಲಿಕೆ  

“ಶುದ್ಧವಾಗಿರುವವರೆಲ್ಲರು ಬಲಿಪ್ರಾಣಿಯ ಮಾಂಸವನ್ನು ತಿನ್ನಬಹುದು.


ಅಂಥ ಪ್ರಾಣಿ ರೋಗದಿಂದ ಸತ್ತರೆ, ಇಲ್ಲವೆ ಕಾಡುಮೃಗದಿಂದ ಕೊಲ್ಲಲ್ಪಟ್ಟರೆ ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಿಕೊಳ್ಳಬಹುದು; ಆದರೆ ಎಷ್ಟು ಮಾತ್ರಕ್ಕೂ ತಿನ್ನಬಾರದು.


ಪಕ್ಷಿಯದಾಗಲಿ, ಪ್ರಾಣಿಯದಾಗಲಿ ಯಾವ ರಕ್ತವನ್ನೂ ನೀವು ಎಲ್ಲಿಯೂ ಊಟಮಾಡಬಾರದು.


ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದವನಾದ ಕಾರಣ, ಅವನು ಕುಲದಿಂದ ಬಹಿಷ್ಕೃತನಾಗಬೇಕು.


ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಬಲಿಪೀಠದ ಮೇಲೆ ದಹನಬಲಿಯ ಸಂಗಡ ಸರ್ವೇಶ್ವರನಾದ ನನಗೆ ಆಹುತಿ ಕೊಡು. ಇದು ನನಗೆ ಪ್ರಿಯವಾದ ಸುಗಂಧ ಆಹಾರ ದಹನಬಲಿ.


ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”


“ಯಾರಾದರು ಅಶುದ್ಧರಾಗಿದ್ದು ಸರ್ವೇಶ್ವರನಿಗೆ ಸಮರ್ಪಿತವಾದ ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸವನ್ನು ತಿಂದರೆ ಅಂಥವರನ್ನು ತಮ್ಮ ಕುಲದಿಂದ ತೆಗೆದುಹಾಕಬೇಕು.


ರಕ್ತವನ್ನು ಭೋಜನ ಮಾಡಿದವನು ಕುಲದಿಂದ ಬಹಿಷ್ಕೃತನಾಗಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು