Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:34 - ಕನ್ನಡ ಸತ್ಯವೇದವು C.L. Bible (BSI)

34 ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸದಲ್ಲಿ ನೈವೇದ್ಯರೂಪವಾಗಿ ಆರತಿಯೆತ್ತುವ ಎದೆಯ ಭಾಗವನ್ನು ಮತ್ತು ಯಾಜಕನಿಗಾಗಿ ಪ್ರತ್ಯೇಕಿಸುವ ತೊಡೆಯನ್ನು ಸರ್ವೇಶ್ವರ ಇಸ್ರಯೇಲ್ ಜನರಿಂದ ತೆಗೆದುಕೊಂಡು ಮಹಾಯಾಜಕ ಆರೋನನಿಗೂ ಅವನ ವಂಶಜರಿಗೂ ಕೊಟ್ಟು, ಅದು ಶಾಶ್ವತ ನಿಯಮವಾಗಿ ಅವರಿಗೆ ಸಲ್ಲುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇಸ್ರಾಯೇಲ್ಯರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನೂ ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನೂ ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲ್ಯರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತನಿಯಮ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನೈವೇದ್ಯರೂಪವಾಗಿ ನಿವಾಳಿಸುವ ಸಮರ್ಪಣೆಯಲ್ಲಿ ಪಶುವಿನ ಎದೆಯ ಭಾಗವನ್ನು ಮತ್ತು ಸಮಾಧಾನಯಜ್ಞಗಳಲ್ಲಿ ಪಶುವಿನ ಬಲ ತೊಡೆಯನ್ನು ಯೆಹೋವನಾದ ನಾನು ಇಸ್ರೇಲರಿಂದ ತೆಗೆದುಕೊಂಡು ಆರೋನನಿಗೂ ಅವನ ಪುತ್ರರಿಗೂ ಕೊಡುತ್ತಿದ್ದೇನೆ. ಇಸ್ರೇಲರು ಈ ನಿಯಮಕ್ಕೆ ಎಂದೆಂದಿಗೂ ವಿಧೇಯರಾಗಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:34
12 ತಿಳಿವುಗಳ ಹೋಲಿಕೆ  

“ಜನರಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ : ದನಕರುಗಳನ್ನು ಹಾಗು ಆಡುಕುರಿಗಳನ್ನು ಕೊಯ್ದು ಬಲಿದಾನ ಮಾಡುವವರೆಲ್ಲರು ಆ ಪಶುಗಳ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.


ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”


ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕ ಸೇವೆಗೆ ಸೇರಿಸು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತ ನಿಯಮವಾಗಿ ಪ್ರಾಪ್ತಿಸುವುದು.


“ಆರೋನನ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ಕೂಡ ಕಾಣಿಕೆಯಾಗಿ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆರತಿ ಮಾಡಿಸು. ಅದು ನಿನಗೇ ಸಲ್ಲತಕ್ಕ ಪಾಲು.


ಆರೋನನ ವಂಶಜರಲ್ಲಿ ಯಾವನು ಆ ಬಲಿಪ್ರಾಣಿಯ ರಕ್ತವನ್ನು ಹಾಗು ಕೊಬ್ಬನ್ನು ಅರ್ಪಿಸುತ್ತಾನೋ, ಆ ಪ್ರಾಣಿಯ ಬಲತೊಡೆ ಅವನ ಪಾಲಿಗೆ ಸೇರಬೇಕು.


ಇಸ್ರಯೇಲಿನ ಜನರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ಪವಿತ್ರ ವಸ್ತುಗಳೆಲ್ಲವೂ ಯಾಜಕನವುಗಳಾಗಿಯೇ ಇರಬೇಕು.


ಲೇವಿಯರು ಇಸ್ರಯೇಲರ ಪರವಾಗಿ ಸರ್ವೇಶ್ವರನ ಪರಿಚರ್ಯ ಮಾಡಲು ಯೋಗ್ಯರಾಗುವಂತೆ ಆರೋನನು ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಲಿ.


ಇದು ನೈವೇದ್ಯವಾಗಿ ಆರತಿಯೆತ್ತುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಬೇಕು. ಇದಾದ ನಂತರ ನಾಜೀರ ವ್ರತಸ್ಥನು ದ್ರಾಕ್ಷಾರಸವನ್ನು ಪಾನಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು