Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:9 - ಕನ್ನಡ ಸತ್ಯವೇದವು C.L. Bible (BSI)

9 ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ, ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯ ಪದಾರ್ಥವೆಲ್ಲ ಅದನ್ನು ಸಮರ್ಪಿಸುವ ಯಾಜಕನಿಗೆ ಸೇರತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಅದನ್ನು ಸಮರ್ಪಿಸುವ ಯಾಜಕನಿಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪ್ರತಿ ಧಾನ್ಯಸಮರ್ಪಣೆಯು ಅದನ್ನು ಅರ್ಪಿಸುವ ಯಾಜಕನಿಗೆ ಸೇರುತ್ತದೆ. ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ಧಾನ್ಯಸಮರ್ಪಣೆಗಳನ್ನು ಯಾಜಕನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಲೆಯಲ್ಲಿ ಬೇಯಿಸಿದ ಬಾಂಡ್ಲಿಯಲ್ಲಿಯೂ ಬೋಗುಣಿಯಲ್ಲಿಯೂ ತಯಾರಿಸಿದ ಎಲ್ಲಾ ಧಾನ್ಯ ಸಮರ್ಪಣೆಯು ಸಮರ್ಪಿಸಿದ ಯಾಜಕನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:9
12 ತಿಳಿವುಗಳ ಹೋಲಿಕೆ  

ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ಅವರು ಧಾನ್ಯ ನೈವೇದ್ಯವನ್ನೂ ದೋಷಪರಿಹಾರಕ ಬಲಿದ್ರವ್ಯವನ್ನೂ ಪ್ರಾಯಶ್ಚಿತ್ತ ಬಲಿದ್ರವ್ಯವನ್ನೂ ಅನುಭವಿಸಲಿ. ಸರ್ವೇಶ್ವರನದಾಗಿಯೇ ಇರಲೆಂದು ಇಸ್ರಯೇಲರು ಹರಕೆಮಾಡಿಕೊಡುವುದೆಲ್ಲವೂ ಅವರಿಗೆ ಸಲ್ಲಬೇಕು.


ಅಗ್ನಿಯಲ್ಲಿ ದಹನಮಾಡದೆ ಉಳಿಸುವ ಮಹಾಪರಿಶುದ್ಧ ಪದಾರ್ಥಗಳೆಲ್ಲ ಅಂದರೆ ಇಸ್ರಯೇಲರು ನನಗೆ ಸಮರ್ಪಿಸುವ ಎಲ್ಲ ಧಾನ್ಯ ದ್ರವ್ಯ, ನೈವೇದ್ಯ ದ್ರವ್ಯ, ಪಾಪ ಪರಿಹಾರಕ ಬಲಿ, ಪ್ರಾಯಶ್ಚಿತ್ತ ಬಲಿಕಾಣಿಕೆ, ಇವುಗಳಲ್ಲಿ ದಹನವಾಗದೆ ಉಳಿದ ಭಾಗಗಳು ಮಹಾಪರಿಶುದ್ಧವಾದುವುಗಳು. ಅವು ನಿನಗೂ ನಿನ್ನ ಸಂತತಿಯವರಿಗೂ ಸಲ್ಲತಕ್ಕವು.


ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶಜರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಕೆಯಾದದ್ದು ಮಹಾಪರಿಶುದ್ಧವಾದುದು.


ದೇವಾಲಯದ ಸೇವೆಯಲ್ಲಿರುವವರು ದೇವಾಲಯದ ಆದಾಯದಿಂದ ಜೀವಿಸುತ್ತಾರೆ. ಬಲಿಪೀಠದ ಬಳಿ ಸೇವೆಮಾಡುವವರು ಅರ್ಪಿತವಾದ ಬಲಿಯಿಂದ ಪಾಲನ್ನು ಪಡೆಯುತ್ತಾರೆ. ಇದು ನಿಮಗೆ ತಿಳಿದಿದೆ.


ಯಾವ ಸೈನಿಕ ಸ್ವಂತ ಖರ್ಚಿನಿಂದ ಸಮರಕ್ಕೆ ನಿಲ್ಲುತ್ತಾನೆ? ಯಾವ ತೋಟಗಾರ ತನ್ನ ಸ್ವಂತ ದ್ರಾಕ್ಷಿಯ ತೋಟದಿಂದ ದ್ರಾಕ್ಷಿಯ ಫಲವನ್ನು ತಿನ್ನದಿರುತ್ತಾನೆ? ಯಾವ ಗೌಳಿಗ ತಾನು ಸಾಕಿದ ಹಸುವಿನ ಹಾಲನ್ನು ಕುಡಿಯದಿರುತ್ತಾನೆ?


ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.”


ಯಾರಾದರು ದಹನಬಲಿಗಾಗಿ ಒಂದು ಪ್ರಾಣಿಯನ್ನು ತಂದಾಗ, ಅದರ ಚರ್ಮ ಆ ಪಶುವನ್ನು ಸಮರ್ಪಿಸುವ ಯಾಜಕನಿಗೆ ಸೇರಬೇಕು.


ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ, ಬರಿ ಹಿಟ್ಟನ್ನಾಗಲಿ ಯಾರಾದರು ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರು ಸಮವಾಗಿ ಅನುಭವಿಸತಕ್ಕದ್ದು.


ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆಹಾಕಿ ಅದನ್ನು ಸ್ವಾಧೀನಪಡಿಸಿಕೊಂಡು ಅಲ್ಲಿಂದ ಜೆರುಸಲೇಮಿಗೆ ದಾಳಿಯಿಡಲು ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು