Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1-2 ಯೆಹೋವನು ಮೋಶೆಗೆ - ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:1
12 ತಿಳಿವುಗಳ ಹೋಲಿಕೆ  

ಈ ಬಗೆಯ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸು. ಆಗ ಅವರು ನನಗೆ ಯಾಜಕರಾಗಿರುವರು.


“ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗಿ ಸೇವೆ ಸಲ್ಲಿಸುವಂತೆ ನೀನು ಅವರನ್ನು ಹೀಗೆ ಪ್ರತಿಷ್ಠಿಸು: ಕಳಂಕರಹಿತವಾದ ಒಂದು ಹೋರಿಕರುವನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.


ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕ ಸೇವೆಗೆ ಸೇರಿಸು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತ ನಿಯಮವಾಗಿ ಪ್ರಾಪ್ತಿಸುವುದು.


“ಅದಲ್ಲದೆ ಆರೋನನನ್ನು ಮತ್ತು ಅವನ ಮಕ್ಕಳನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ ಅವರನ್ನು ಸ್ನಾನಮಾಡಿಸು.


ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟರು. ಸೀನಾಯಿ ಮರುಭೂಮಿಯಲ್ಲಿ ಇಸ್ರಯೇಲರು ಅರ್ಪಿಸಬೇಕಾದುದನ್ನು ಸರ್ವೇಶ್ವರನಿಗೆ ಅರ್ಪಿಸಬೇಕೆಂದು ಮೋಶೆ ಆಜ್ಞಾಪಿಸಿ ಮೇಲ್ಕಂಡ ವಿಧಿಗಳನ್ನು ಕೊಟ್ಟನು.


“ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು, ಅಭಿಷೇಕ ತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಹಾಗು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡು ಬಾ;


ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II


:ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.


“ಆರೋನನ ಯಾಜಕ ದೀಕ್ಷಾವಸ್ತ್ರಗಳನ್ನು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗುವಂತೆ ಇಡಬೇಕು. ಅವರೂ ಯಾಜಕಾಭಿಷಿಕ್ತರಾಗಿ ಮಹಾಯಾಜಕ ಸೇವೆಯನ್ನು ಕೈಗೊಂಡಾಗ ಅವುಗಳನ್ನು ಧರಿಸಿಕೊಳ್ಳಬೇಕು,


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಅದನ್ನು ಮಾಡಿದ್ದರು.


ಯಾಜಕ ಸೇವಾವೃತ್ತಿಯನ್ನು ಕೈಗೊಳ್ಳುವುದಕ್ಕೆ ಅಭಿಷೇಕದಿಂದ ಪ್ರತಿಷ್ಠಿತರಾದವರು ಇವರೇ.


ಆರೋನನೂ ಅವನ ವಂಶಜರೂ ಸುಗಂಧ ಕಾಣಿಕೆಗಳನ್ನು ಅರ್ಪಿಸುತ್ತಿದ್ದರು. ಬಲಿಪೀಠದ ಮೇಲೆ ಸಮರ್ಪಿಸುವ ಬಲಿಗಳನ್ನು ಅರ್ಪಣೆಮಾಡುತ್ತಿದ್ದರು. ಅತೀ ಪರಿಶುದ್ಧ ಸ್ಥಳದ ಎಲ್ಲ ಆರಾಧನೆಗೂ ಇಸ್ರಯೇಲರ ಕ್ಷಮಾಪಣೆಗಾಗಿ ಸರ್ವೇಶ್ವರ ನೇಮಿಸಿದ ಬಲಿಯರ್ಪಣೆಗಳಿಗೂ ಧೂಪಾರತಿಗೂ ಅವರೇ ಜವಾಬ್ದಾರರು ಆಗಿದ್ದರು. ದೇವರ ಸೇವಕ ಮೋಶೆ ಕೊಟ್ಟ ನಿಯಮಗಳಿಗೆ ಅನುಸಾರವಾಗಿ ಇದೆಲ್ಲವನ್ನೂ ಅವರು ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು