Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:13 - ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ಪೇಟಗಳನ್ನು ತೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟುಗಳನ್ನು ಸುತ್ತಿ ಮುಂಡಾಸಗಳನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟನ್ನು ಕಟ್ಟಿದನು. ಬಳಿಕ ಅವರ ತಲೆಗಳಿಗೆ ಮುಂಡಾಸಗಳನ್ನು ಇಟ್ಟನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ, ಅವರ ನಡುಗಳನ್ನು ನಡುಕಟ್ಟುಗಳಿಂದ ಕಟ್ಟಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:13
15 ತಿಳಿವುಗಳ ಹೋಲಿಕೆ  

ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


“ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.


ನೀತಿಭೂಷಿತರಾಗಲಿ ನಿನ್ನ ಯಾಜಕರು I ಆನಂದ ಘೋಷಮಾಡಲಿ ನಿನ್ನ ಭಕ್ತಜನರು II


ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಆ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಾಪಿಸು.


ಮೋಶೆಯ ಅಪ್ಪಣೆಯ ಮೇರೆಗೆ ಅವರು ಬಂದು ಸತ್ತವರ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಹೊರಕ್ಕೆ ಹೊತ್ತುಕೊಂಡು ಹೋದರು.


ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವೂ ಪರಿಶುದ್ಧವಾದುವು. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಜನಸಾಮಾನ್ಯರ ಪ್ರಾಕಾರಕ್ಕೆ ಬರುತ್ತಾರೆ,’ ಎಂದನು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಿಂದ ತೊಳೆಯಿಸಿ ಆ ಟಗರನ್ನು ಬಲಿಪೀಠದ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು