Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:2 - ಕನ್ನಡ ಸತ್ಯವೇದವು C.L. Bible (BSI)

2 “ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು, ಅಭಿಷೇಕ ತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಹಾಗು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡು ಬಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಅವರೊಂದಿಗೆ ಯಾಜಕ ವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯಿಂದ ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಆರೋನನನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಉಡುಪುಗಳನ್ನೂ, ಅಭಿಷೇಕ ತೈಲವನ್ನೂ, ಪಾಪ ಪರಿಹಾರದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:2
15 ತಿಳಿವುಗಳ ಹೋಲಿಕೆ  

ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.


ದೇವಮಂದಿರದೊಳಗೆ ನಡೆಯುವ ಸೇವೆಗೋಸ್ಕರ ಬೇಕಾದ ಅಲಂಕಾರವಸ್ತ್ರ, ಅಂದರೆ ಆರೋನನಿಗೆ ಬೇಕಾದ ದೀಕ್ಷಾವಸ್ತ್ರ ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರ ಇವುಗಳನ್ನೂ ತಂದರು.


“ಆರೋನನ ಮಕ್ಕಳಿಗೆ ತಕ್ಕ ಗೌರವ ಹಾಗು ಶೋಭೆ ಸಿಗುವಂತೆ ನಿಲುವಂಗಿಗಳನ್ನೂ ನಡುಕಟ್ಟುಗಳನ್ನೂ ಹಾಗು ಪೇಟಗಳನ್ನು ಮಾಡಿಸು.


:ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.


ಯಾಜಕನು ನಾರುಮಡಿಯ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರುಮಡಿ ಚಡ್ಡಿಯನ್ನು ಹಾಕಿಕೊಂಡು ಬಲಿಪೀಠದ ಮೇಲಿನ ದಹನಬಲಿ ದ್ರವ್ಯದ ಬೂದಿಯನ್ನು ಎತ್ತಿ ವೇದಿಕೆಯ ಬಳಿ ಇಡಬೇಕು.


ಸರ್ವೇಶ್ವರ ಸ್ವಾಮಿ ಮೋಶೆಗೆ:


ಜನಸಮೂಹವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಕರೆಯಿಸು,” ಎಂದು ಆಜ್ಞೆ ಮಾಡಿದರು.


ಅನಂತರ ಮೋಶೆ ಅಭಿಷೇಕದ ಎಣ್ಣೆಯನ್ನು ತೆಗೆದುಕೊಂಡು ದೇವದರ್ಶನದ ಗುಡಾರವನ್ನು ಹಾಗು ಅದರಲ್ಲಿದ್ದ ಎಲ್ಲವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.


ತರುವಾಯ ಅವನು ದಹನ ಬಲಿಗಾಗಿ ಟಗರನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು.


ಇದಾದ ಮೇಲೆ ಯಾಜಕಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ಮೋಶೆ ತರಿಸಿದನು. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು