Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:31 - ಕನ್ನಡ ಸತ್ಯವೇದವು C.L. Bible (BSI)

31 ಆರೋನನಿಗೂ ಅವನ ಮಕ್ಕಳಿಗೂ ಮೋಶೆ ಹೀಗೆಂದನು: “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಬೇಕು. ಅದನ್ನೂ ಯಾಜಕಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ರೊಟ್ಟಿಗಳನ್ನೂ ನೀವು ಅಲ್ಲೆ ಊಟಮಾಡಬೇಕು. ಇದು ಸರ್ವೇಶ್ವರನು ನನಗಿತ್ತ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮತ್ತು ಮೋಶೆ ಆರೋನನಿಗೂ ಅವನ ಮಕ್ಕಳಿಗೂ ಹೀಗಂದನು - ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಬೇಯಿಸಿ ಅದನ್ನೂ ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನೂ ಅಲ್ಲೇ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ತರುವಾಯ ಮೋಶೆಯು ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳಿದನು: “ನೀವು ಮಾಂಸವನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಬೇಯಿಸಿ ತಿನ್ನಬೇಕು. ಪ್ರತಿಷ್ಠೆಕಾಣಿಕೆಯ ಬುಟ್ಟಿಯಲ್ಲಿರುವ ರೊಟ್ಟಿಯೊಡನೆ ಅದನ್ನು ಅಲ್ಲಿ ತಿನ್ನಿರಿ. ಮಾಂಸವನ್ನೂ ರೊಟ್ಟಿಯನ್ನೂ ಆ ಸ್ಥಳದಲ್ಲಿ ತಿನ್ನಿರಿ. ನಾನು ಹೇಳುವ ಹಾಗೆ ಇದನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಮೋಶೆಯು ಆರೋನನಿಗೂ, ಅವನ ಪುತ್ರರಿಗೂ, “ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ. ಅದನ್ನು ಪ್ರತಿಷ್ಠಿತ ಬುಟ್ಟಿಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು. ನಾನು ಆಜ್ಞಾಪಿಸಿ ಹೇಳಿದಂತೆ, ‘ಆರೋನನು ಮತ್ತು ಅವನ ಪುತ್ರರು ಅದನ್ನು ತಿನ್ನಬೇಕು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:31
12 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ಆಗ ಯೇಸು, “ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು.


ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.


“ಆ ದೋಷಪರಿಹಾರಕ ಬಲಿ ಮಹಾಪರಿಶುದ್ಧವಾದುದಲ್ಲವೆ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆ, ಅವರ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷನಿವಾರಿಸುವಂತೆ, ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲವೆ? ಅದನ್ನೇಕೆ ನೀವು ಪರಿಶುದ್ಧ ಸ್ಥಳದಲ್ಲಿ ತಿನ್ನಲಿಲ್ಲ?


ಕೃತಜ್ಞತಾ ಬಲಿಪ್ರಾಣಿಯ ಮಾಂಸವನ್ನು ಬಲಿ ನಡೆದ ದಿನದಲ್ಲೇ ಭೋಜನ ಮಾಡಬೇಕು. ಮರುದಿನದವರೆಗೆ ಕಿಂಚಿತ್ತನ್ನೂ ಉಳಿಸಬಾರದು.


ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಬೆಳಗಿ ನೀರಿನಿಂದ ತೊಳೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು