Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:35 - ಕನ್ನಡ ಸತ್ಯವೇದವು C.L. Bible (BSI)

35 ಆದುದರಿಂದ ನೀವು ಆ ಆಜ್ಞೆಯ ಮೇರೆಗೆ ಏಳು ದಿನಗಳೂ ಹಗಲಿರುಳು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ. ಇದು ಸರ್ವೇಶ್ವರನ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆದದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ; ಹೀಗೆಯೇ ನನಗೆ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನೀವು ಏಳು ದಿನಗಳು ಹಗಲುರಾತ್ರಿ ದೇವದರ್ಶನಗುಡಾರದ ಬಾಗಿಲಿನಲ್ಲಿ ಇರಬೇಕು. ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾಗದಿದ್ದರೆ ಸಾಯುವಿರಿ! ಯೆಹೋವನು ಆ ಆಜ್ಞೆಗಳನ್ನು ನನಗೆ ಕೊಟ್ಟನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದ್ದರಿಂದ ಏಳು ದಿನಗಳವರೆಗೆ ನೀವು ಸಾಯದಂತೆ ಹಗಲೂ ರಾತ್ರಿ ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಆಜ್ಞೆಯನ್ನು ಕೈಗೊಳ್ಳಬೇಕು. ಏಕೆಂದರೆ ಹಾಗೆಯೇ ನನಗೆ ಅಪ್ಪಣೆಯಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:35
24 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ.


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಪ್ರೀತಿಯಿಟ್ಟು, ಅವರ ನಿಯಮಗಳನ್ನು ಕೈಕೊಂಡು ಅವರ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.


ಅದು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುತ್ತಿದ್ದ ಸಂದರ್ಭದಲ್ಲಿ ಇಸ್ರಯೇಲರು ಸರ್ವೇಶ್ವರನ ಸೂಚನೆಯನ್ನು ಅನುಸರಿಸಿ ಪ್ರಯಾಣಮಾಡದೆ ಇರುತ್ತಿದ್ದರು.


ಅವರು ದೇವದರ್ಶನದ ಗುಡಾರದ ಬಳಿಯಲ್ಲಿರಬೇಕು; ಆರೋನನಿಗೂ ಇಡೀ ಸಮಾಜಕ್ಕೂ ನೆರವಾಗಿ ದೇವಸ್ಥಾನದ ಪರಿಚರ್ಯವನ್ನು ನಡೆಸಬೇಕು.


ಧರ್ಮಶಾಸ್ತ್ರ ನೇಮಿಸುವ ಪ್ರಧಾನಯಾಜಕರು ಕುಂದುಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವವಾಕ್ಯವು ಸದಾ ಸರ್ವಸಂಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ಪ್ರಿಯ ತಿಮೊಥೇಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡಿಕೋ. ಪ್ರಾಪಂಚಿಕ ವ್ಯರ್ಥ ಸಂಭಾಷಣೆಗಳಿಂದಲೂ ‘ಜ್ಞಾನಿ'ಗಳೆಂದು ತಪ್ಪಾಗಿ ಕೊಚ್ಚಿಕೊಳ್ಳುವವರ ವಾಗ್ವಾದಗಳಿಂದಲೂ ದೂರವಿರು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ತಿಮೊಥೇಯನೇ, ನನ್ನ ಕುಮಾರನೇ, ಹಿಂದೆ ನಿನ್ನ ಕುರಿತು ಮಾಡಲಾಗಿರುವ ಪ್ರವಾದನೆಗಳಿಗೆ ಅನುಗುಣವಾಗಿ ನಾನು ನಿನಗೆ ಕೊಡುವ ಆಜ್ಞೆ ಇದು: ಪ್ರವಾದನೆಗಳಿಂದ ಪ್ರೇರಣೆ ಪಡೆದು ದಿಟ್ಟಹೋರಾಟವನ್ನು ಮಾಡು.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ಆ ಕ್ಷೇತ್ರ ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರು ಹಾಗು ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರು ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.


ಏಳು ದಿವಸ ನೀನು ದಿನದಿನವೂ ದೋಷಪರಿಹಾರಕ್ಕಾಗಿ ಒಂದೊಂದು ಹೋತವನ್ನು ಅರ್ಪಿಸು; ಯಾಜಕರು ಸಹ ಕಳಂಕರಹಿತವಾದ ಹೋರಿಯನ್ನೂ ಹಿಂಡಿನಿಂದ ತಂದ ಕಳಂಕರಹಿತವಾದ ಟಗರನ್ನೂ ಅರ್ಪಿಸಲಿ;


ಮೂರನೇ ದಿನ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನ ಶುದ್ಧನಾಗುವನು. ಮೂರನೆಯ ದಿನ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆ ದಿನದಲ್ಲೂ ಶುದ್ಧನಾಗನು.


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು. ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.


ಆರೋನನ ಮಕ್ಕಳಲ್ಲಿ ನಾದಾಬ್ ಮತ್ತು ಅಬೀಹು ಎಂಬಿಬ್ಬರು ತಮ್ಮ ತಮ್ಮ ಧೂಪ ಕಳಸಗಳಲ್ಲಿ ಸರ್ವೇಶ್ವರ ಸ್ವಾಮಿ ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದರು.


ಬಳಿಕ ಮೋಶೆ ಅಭಿಷೇಕ ಎಣ್ಣೆಯಿಂದಲೂ ಬಲಿಪೀಠದ ಮೇಲಿದ್ದ ರಕ್ತದಿಂದಲೂ ಸ್ವಲ್ಪ ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೂ ಚಿಮುಕಿಸಿದನು. ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠಿಸಿದನು.


ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿವಸದ ಆಚರಣೆಯನ್ನು ನಡೆಸಿ ಆರೋನ ಮತ್ತು ಅವನ ಮಕ್ಕಳನ್ನು ಯಾಜಕ ಸೇವೆಗೆ ಅಭಿಷೇಕಿಸು.


ನಿಮ್ಮ ದೋಷಪರಿಹಾರಕ್ಕಾಗಿ ಈ ದಿನ ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂಬುದು ಸರ್ವೇಶ್ವರನ ಆಜ್ಞೆ.


ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದನ್ನೆಲ್ಲಾ ಆರೋನ ಮತ್ತು ಅವನ ಮಕ್ಕಳು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು