Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:4 - ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಹೇಳಿದಂತೆಯೇ ಮೋಶೆ ಮಾಡಿದನು. ಜನರೆಲ್ಲರು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಹೇಳಿದಂತೆಯೇ ಮೋಶೆ ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಕೂಡಿದಾಗ ಮೋಶೆ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಆಜ್ಞಾಪಿಸಿದ್ದನ್ನು ಮೋಶೆ ಮಾಡಿದನು. ಜನರು ಒಟ್ಟಾಗಿ ದೇವದರ್ಶನಗುಡಾರದ ಬಾಗಿಲಲ್ಲಿ ಸೇರಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಮೋಶೆಯು, ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆಯೇ ಮಾಡಿದನು. ಸಭೆಯು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:4
19 ತಿಳಿವುಗಳ ಹೋಲಿಕೆ  

ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.


ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ: ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಆದುದರಿಂದ ನೀವು ಆ ಆಜ್ಞೆಯ ಮೇರೆಗೆ ಏಳು ದಿನಗಳೂ ಹಗಲಿರುಳು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ. ಇದು ಸರ್ವೇಶ್ವರನ ಆಜ್ಞೆ.


ಮೋಶೆ ಬಲಿಪ್ರಾಣಿಯ ಎದೇಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು. ಸರ್ವೇಶ್ವರನ ಆಜ್ಞಾನುಸಾರ ಆ ಯಾಜಕಾಭಿಷೇಕ ಬಲಿಯ ಟಗರಿನ ಎದೆಯ ಭಾಗ ಮೋಶೆಗೆ ಸಲ್ಲತಕ್ಕದಾಗಿತ್ತು.


ಸರ್ವೇಶ್ವರನ ಆಜ್ಞಾನುಸಾರ ಆ ಪ್ರಾಣಿಯ ಮಿಕ್ಕ ಭಾಗಗಳನ್ನು, ಅಂದರೆ ಅದರ ಚರ್ಮ, ಮಾಂಸ ಹಾಗು ಕಲ್ಮಷಗಳನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.


ಅನಂತರ ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ಪೇಟಗಳನ್ನು ತೊಡಿಸಿದನು.


ಅವನ ತಲೆಗೆ ಸಿರಿಪೇಟವನ್ನು ತೊಡಿಸಿ, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದು ಅವನಿಗೆ ಪವಿತ್ರ ಕಿರೀಟದಂತಿತ್ತು.


ಹುರಿನಾರಿನಿಂದ ಚಡ್ಡಿಗಳನ್ನೂ ಹುರಿನಾರಿನಿಂದಲೂ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ಪದಕವು ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿದರು. ಸರ್ವೇಶ್ವರ ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದರು.


ಆ ಎರಡು ರತ್ನಗಳು ಇಸ್ರಯೇಲರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಅವುಗಳನ್ನು ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದರು. ಸರ್ವೇಶ್ವರ ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದರು.


ಕವಚದ ಮೇಲಿದ್ದ ಅಪೂರ್ವವಾದ ಕಸೂತಿ ನಡುಕಟ್ಟು ಕವಚಕ್ಕೆ ಅಂಗವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದಲೂ, ಚಿನ್ನದ ದಾರದಿಂದಲೂ ಮತ್ತು ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲು ತಯಾರಿಸಲಾಗಿತ್ತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಲಾಗಿತ್ತು.


ಸರ್ವೇಶ್ವರ ಸ್ವಾಮಿ ಮೋಶೆಗ ಆಜ್ಞಾಪಿಸಿದಂತೆ ಆ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನು ಮತ್ತು ಆರೋನನಿಗೆ ದೀಕ್ಷಾವಸ್ತ್ರಗಳನ್ನು ಮಾಡಿದರು.


ಜನಸಮೂಹವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಕರೆಯಿಸು,” ಎಂದು ಆಜ್ಞೆ ಮಾಡಿದರು.


ಮೋಶೆ ಅವರಿಗೆ, “ನಾನು ಈಗ ಮಾಡುವ ಕಾರ್ಯ ಸರ್ವೇಶ್ವರ ಸ್ವಾಮಿಯೇ ಆಜ್ಞಾಪಿಸಿದ ಕಾರ್ಯ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು