Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:7 - ಕನ್ನಡ ಸತ್ಯವೇದವು C.L. Bible (BSI)

7 ಆಮೇಲೆ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿಸಿ, ಅದರಿಂದ ಅವನ ಕವಚವನ್ನು ಕಟ್ಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ ನಡುಕಟ್ಟನ್ನು ಸುತ್ತಿ ಮೇಲಂಗಿಯನ್ನು ತೊಡಿಸಿ ಕವಚವನ್ನು ಹಾಕಿಸಿ ಕವಚದ ಮೇಲಣ ವಿಚಿತ್ರವಾದ ನಡುಕಟ್ಟನ್ನು ಕಟ್ಟಿ ಅದರಿಂದ ಕವಚವನ್ನು ಅವನಿಗೆ ಬಂಧಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಲುವಂಗಿಯನ್ನು ಆರೋನನಿಗೆ ತೊಡಿಸಿದನು; ನಡುಕಟ್ಟನ್ನು ಕಟ್ಟಿದನು; ಮೇಲಂಗಿಯನ್ನು ತೊಡಿಸಿದನು. ಏಫೋದನ್ನು ಹಾಕಿಸಿ ಕವಚದ ಮೇಲಿನ ವಿಶೇಷವಾದ ನಡುಕಟ್ಟನ್ನು ಕಟ್ಟಿದನು; ಎದೆಕವಚವನ್ನು ಬಿಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆರೋನನಿಗೆ ನಿಲುವಂಗಿಯನ್ನು ಹೊದಿಸಿ, ನಡುಕಟ್ಟಿನಿಂದ ಅವನ ನಡುವನ್ನು ಕಟ್ಟಿ, ಅವನಿಗೆ ಮೇಲಂಗಿಯನ್ನು ತೊಡಿಸಿ, ಅವನ ಮೇಲೆ ಏಫೋದನ್ನು ಹಾಕಿ, ಏಫೋದಿನ ಕಲಾತ್ಮಕವಾದ ನಡುಕಟ್ಟಿನಿಂದ ಅವನ ನಡುವನ್ನೂ ಕಟ್ಟಿ, ಅದರಿಂದ ಅವನನ್ನು ಬಿಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:7
12 ತಿಳಿವುಗಳ ಹೋಲಿಕೆ  

ತಯಾರಿಸಬೇಕಾದ ವಸ್ತ್ರಗಳು ಇವು: ಎದೆಕವಚ, ಏಫೋದ್ ಕವಚ, ಮೇಲಂಗಿ, ಕಸೂತಿ ನಿಲುವಂಗಿ, ಗುರುಪೇಟ ಮತ್ತು ನಡುಕಟ್ಟು, ನಿನ್ನ ಅಣ್ಣ ಆರೋನನು ಮತ್ತು ಅವನ ಮಕ್ಕಳು ನನ್ನ ಯಾಜಕರಾಗಿ ಸೇವೆ ಮಾಡುವಂತೆ ಅವರಿಗೆ ಈ ದೀಕ್ಷಾವಸ್ತ್ರಗಳನ್ನು ಮಾಡಿಸು.


ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ.


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ತರುವಾಯ ಆರೋನನಿಗೆ ಆ ವಸ್ತ್ರಗಳನ್ನು ಅಂದರೆ, ನಿಲುವಂಗಿಯನ್ನು, ಕವಚದೊಳಗೆ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು, ಎಫೋದ್ ಕವಚವನ್ನು, ಎದೆಕವಚವನ್ನು ತೊಡಿಸಿ, ಕವಚದ ಕಸೂತಿ ನಡುಕಟ್ಟನ್ನು ಕಟ್ಟು.


ನಿನ್ನ ಅಣ್ಣ ಆರೋನನಿಗೆ ತಕ್ಕ ಗೌರವ ಹಾಗು ಶೋಭೆ ತರುವಂಥ ದೀಕ್ಷಾವಸ್ತ್ರಗಳನ್ನು ಮಾಡಿಸು.


‘ಏಫೋದ್’ ಎಂಬ ಕವಚವನ್ನು ಹುರಿನಾರಿನ ಬಟ್ಟೆಯಿಂದ ಮಾಡಿಸು. ಚಿನ್ನದ ದಾರದಿಂದಲೂ ಹಾಗು ನೀಲಿ, ಊದ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದವರು ಅದನ್ನು ಅಲಂಕರಿಸಲಿ.


ಇಸ್ರಯೇಲರ ಕುಟುಂಬಗಳಲ್ಲೆಲ್ಲಾ ಅವರನ್ನೇ, ಯಾಜಕ ಸೇವಾವೃತ್ತಿಗೆ ಆರಿಸಿಕೊಂಡೆ: ಅಂದರೆ, ಬಲಿಯರ್ಪಿಸುವುದಕ್ಕೆ, ಧೂಪಾರತಿ ಎತ್ತುವುದಕ್ಕೆ ಹಾಗು ‘ಏಫೋದ’ನ್ನು ಧರಿಸಿಕೊಳ್ಳುವುದಕ್ಕೆ ಆರಿಸಿಕೊಂಡೆ; ಇಸ್ರಯೇಲರು ಅರ್ಪಿಸುವ ಬಲಿಶೇಷದ ಹಕ್ಕನ್ನೂ ಅವರಿಗೆ ಅನುಗ್ರಹಿಸಿದೆ.


ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವೂ ಪರಿಶುದ್ಧವಾದುವು. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಜನಸಾಮಾನ್ಯರ ಪ್ರಾಕಾರಕ್ಕೆ ಬರುತ್ತಾರೆ,’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು