Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:10 - ಕನ್ನಡ ಸತ್ಯವೇದವು C.L. Bible (BSI)

10 ದೋಷಪರಿಹಾರಕ ಬಲಿಪ್ರಾಣಿಯ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಾಳಿಜದ ಹತ್ತಿರವಿರುವ ಕೊಬ್ಬನ್ನು, ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ, ಬಲಿಪೀಠದ ಮೇಲೆ ಹೋಮಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ದೋಷಪರಿಹಾರಕಯಜ್ಞಪಶುವಿನ ಕೊಬ್ಬನ್ನೂ ಹುರುಳಿಕಾಯಿಗಳನ್ನೂ ಕಾಳಿಜದ ಹತ್ತಿರವಿರುವ ಕೊಬ್ಬನ್ನೂ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆರೋನನು ಪಾಪಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು ಮತ್ತು ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನು ತೆಗೆದುಕೊಂಡನು. ಅವನು ಆ ವಸ್ತುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದರ ಪಾಪ ಪರಿಹಾರದ ಬಲಿಯ ಕೊಬ್ಬು, ಮೂತ್ರಪಿಂಡಗಳು ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬು, ಇವುಗಳನ್ನು ಅವನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ, ಬಲಿಪೀಠದ ಮೇಲೆ ಸುಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:10
13 ತಿಳಿವುಗಳ ಹೋಲಿಕೆ  

ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಮಗನೇ, ನಾನು ಹೇಳುವುದು ನಾಟಲಿ ನಿನ್ನ ಮನಸ್ಸಿಗೆ; ನನ್ನ ನಡತೆ ಆದರ್ಶಕವಾಗಿರಲಿ ನಿನ್ನ ಕಣ್ಣುಗಳಿಗೆ.


ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II


ಅದರ ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಹಾಗು ಅವುಗಳ ಮೇಲಿರುವ ಕೊಬ್ಬನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮ ಮಾಡಬೇಕು.


ಆರೋನನ ಮಕ್ಕಳು ಆ ಬಲಿಪ್ರಾಣಿಯ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಹೊಯ್ದನು.


ಅದರ ಮಾಂಸವನ್ನೂ ಚರ್ಮವನ್ನೂಪಾಳೆಯದ ಹೊರಗೆ ಬೆಂಕಿಯಲ್ಲಿ ಸುಡಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು