Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:17 - ಕನ್ನಡ ಸತ್ಯವೇದವು C.L. Bible (BSI)

17 ಜನರು ತಂದ ನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಬೆಳಿಗ್ಗೆಯ ದಹನಬಲಿಯ ಜೊತೆಗೆ ಅದನ್ನು ಪೀಠದ ಮೇಲೆ ಹೋಮಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ತಂದ ಧಾನ್ಯನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು, ಹೊತ್ತಾರೆಯ ಸರ್ವಾಂಗಹೋಮದ ಸಂಗಡ ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ತಂದ ನೈವೇದ್ಯದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಹೊತ್ತಾರೆಯ ಸರ್ವಾಂಗ ಹೋಮವನ್ನಲ್ಲದೆ ಅದನ್ನೂ ಯಜ್ಞವೇದಿಯ ಮೇಲೆ ಹೋಮಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆರೋನನು ಧಾನ್ಯನೈವೇದ್ಯವನ್ನು ಯಜ್ಞವೇದಿಕೆಯ ಬಳಿಗೆ ತಂದನು. ಅವನು ಒಂದು ಹಿಡಿ ಧಾನ್ಯವನ್ನು ತೆಗೆದುಕೊಂಡು ದಿನಂಪ್ರತಿ ಹೊತ್ತಾರೆಯ ವೇಳೆಯಲ್ಲಿ ಅರ್ಪಿಸುವ ಯಜ್ಞವಲ್ಲದೆ ಇದನ್ನೂ ಕೂಡ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಧಾನ್ಯ ಸಮರ್ಪಣೆಯ ಬಲಿಯನ್ನು ತಂದು, ಅದರಲ್ಲಿ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಬೆಳಗಿನ ದಹನಬಲಿ ಯಜ್ಞದ ಬಳಿಯಲ್ಲಿ ಅದನ್ನು ಹೋಮ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:17
8 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ.


ಎಂಟನೆಯ ದಿನ ಮೋಶೆ ಆರೋನನನ್ನೂ ಅವನ ಮಕ್ಕಳನ್ನೂ ಹಾಗು ಇಸ್ರಯೇಲರ ಹಿರಿಯರನ್ನೂ ಕರೆಸಿದನು.


ಆರೋನನ ವಂಶಜರಾದ ಯಾಜಕರು ಅದನ್ನು ಬಲಿಪೀಠದಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ದಹನಬಲಿಪದಾರ್ಥಗಳೊಡನೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧ ಬಲಿಯಾಗಿರುವುದು.


ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಬಲಿಪೀಠದ ಮೇಲೆ ಪ್ರತೀದಿನ ಮುಂಜಾನೆ ಹಾಗು ಸಂಜೆ ದಹನಬಲಿಯರ್ಪಿಸಬೇಕಾಗಿ ಇತ್ತು.


ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು