Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:22 - ಕನ್ನಡ ಸತ್ಯವೇದವು C.L. Bible (BSI)

22 ಆರೋನನು ಆ ದೋಷಪರಿಹಾರಕ ಬಲಿಯನ್ನೂ ದಹನಬಲಿಯನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆಮೇಲೆ ಬಲಿಪೀಠದಿಂದ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆರೋನನು ಆ ದೋಷಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ತರುವಾಯ ಆರೋನನು ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆರೋನನು ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿ ಮುಗಿಸಿದ ನಂತರ ಯಜ್ಞವೇದಿಕೆಯಿಂದ ಕೆಳಗಿಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಮತ್ತು ಸಮಾಧಾನದ ಬಲಿಯನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:22
16 ತಿಳಿವುಗಳ ಹೋಲಿಕೆ  

ಕಟ್ಟಕಡೆಗೆ ಯೇಸುಸ್ವಾಮಿ ಶಿಷ್ಯರನ್ನು ಬೆಥಾನಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು. ಅಲ್ಲಿ ತಮ್ಮ ಕರಗಳನ್ನೆತ್ತಿ ಆಶೀರ್ವದಿಸಿದರು.


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಅನಂತರ ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಗಳನ್ನಿರಿಸಿ ಹರಸಿದರು.


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಇದಾದ ಮೇಲೆ ಎದ್ದು ನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.


ಅಮ್ರಾಮನ ಮಕ್ಕಳು ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾಪರಿಶುದ್ಧ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟಿದ್ದರು. ಇವರು ಸರ್ವೇಶ್ವರನ ಸನ್ನಿಧಿಯಲ್ಲಿ ಸದಾ ಧೂಪಾರತಿ ಎತ್ತುವವರೂ ಸೇವೆ ಮಾಡುವವರೂ ಸರ್ವೇಶ್ವರನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರಬೇಕಿತ್ತು.


ಇಸ್ರಯೇಲ್ ಸರ್ವಸಮಾಜದವರನ್ನು ಆಶೀರ್ವದಿಸುತ್ತಾ ಗಟ್ಟಿಯಾಗಿ ಹೀಗೆಂದನು:


“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಕರ್ತನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳಿದುಕೊಂಡು ಅವರನ್ನು ಆಶೀರ್ವದಿಸಿದನು.


ಸರ್ವೇಶ್ವರ ಮೋಶೆಗೆ ಹೀಗೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು