Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:9 - ಕನ್ನಡ ಸತ್ಯವೇದವು C.L. Bible (BSI)

9 ಆರೋನನ ಮಕ್ಕಳು ಆ ಬಲಿಪ್ರಾಣಿಯ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಹೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆರೋನನ ಪುತ್ರರು ಅದರ ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನ ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯಜ್ಞವೇದಿಕೆಯ ಮೂಲೆಗಳಿಗೆ ಹಚ್ಚಿದನು. ಬಳಿಕ ಆರೋನನು ರಕ್ತವನ್ನು ಯಜ್ಞವೇದಿಕೆಯ ಬುಡದಲ್ಲಿ ಸುರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಆರೋನನ ಪುತ್ರರು ಅವನ ಬಳಿಗೆ ರಕ್ತವನ್ನು ತಂದರು. ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಬಲಿಪೀಠದ ಅಡಿಯಲ್ಲಿ ಉಳಿದ ರಕ್ತವನ್ನು ಹೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:9
14 ತಿಳಿವುಗಳ ಹೋಲಿಕೆ  

ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು.


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


ತರುವಾಯ ಅವನು ಹೊರಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿರುವ ಬಲಿಪೀಠದ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲೂ ಆ ಹೋತದ ರಕ್ತದಲ್ಲೂ ಸ್ವಲ್ಪ ಸ್ವಲ್ಪತೆಗೆದುಕೊಂಡು ಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.


ಅನಂತರ ಜನರ ಪರವಾಗಿ ಶಾಂತಿಸಮಾಧಾನದ ಬಲಿದಾನಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.


ತರುವಾಯ ದಹನಬಲಿಯ ಪ್ರಾಣಿಯನ್ನು ವಧಿಸಿಬಿಟ್ಟನು. ಆರೋನನ ಮಕ್ಕಳು ಅದರ ರಕ್ತವನ್ನು ತಂದು ಅವನಿಗೆ ಒಪ್ಪಿಸಿದರು. ಅವನು ಅದನ್ನು ಬಲಿಪೀಠದ ಸುತ್ತಲು ಚಿಮುಕಿಸಿದನು.


ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಬಲಿಪೀಠದ ಬುಡದಲ್ಲಿ ಸುರಿದುಬಿಡಲಿ.


ಯಾಜಕನು ಆ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಡಬೇಕು.


ದೋಷಪರಿಹಾರಕ ಬಲಿಪ್ರಾಣಿಯ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಾಳಿಜದ ಹತ್ತಿರವಿರುವ ಕೊಬ್ಬನ್ನು, ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ, ಬಲಿಪೀಠದ ಮೇಲೆ ಹೋಮಮಾಡಿದನು.


ಹೋಮಕುಂಡದ ಅಂತಸ್ತಿನ ಎತ್ತರವು ಎರಡು ಮೀಟರ್; ಆ ಹೋಮಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.


ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬಲಿಪೀಠದ ನಾಲ್ಕು ಕೊಂಬುಗಳಿಗೆ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೆ ಹಾಗು ಸುತ್ತಣ ದಿಂಡಿಗೆ ಹಚ್ಚಿ ಬಲಿಪೀಠದ ದೋಷವನ್ನು ಪರಿಹರಿಸಿ, ಅದನ್ನು ಶುದ್ಧಿಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು