Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:1 - ಕನ್ನಡ ಸತ್ಯವೇದವು C.L. Bible (BSI)

1 ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಕ್ರಿಸ್ತನ ದಾಸನೂ ಯಾಕೋಬನ ತಮ್ಮನೂ ಆಗಿರುವ ಯೂದನು ತಂದೆಯಾದ ದೇವರಲ್ಲಿ ಪ್ರಿಯರಾದವರೂ ಯೇಸು ಕ್ರಿಸ್ತನಿಗಾಗಿ ಕಾಯಲ್ಪಟ್ಟವರೂ ಆಗಿರುವವರಿಗೆ ಬರೆಯುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಕ್ರಿಸ್ತನ ಸೇವಕನೂ ಯಾಕೋಬನ ಸಹೋದರನೂ ಆಗಿರುವ ಯೂದನು ದೇವರಿಂದ ಕರೆಯಲ್ಪಟ್ಟವರಿಗೂ ತಂದೆಯಾದ ದೇವರಿಗೆ ಪ್ರಿಯರಾದವರಿಗೂ ಯೇಸು ಕ್ರಿಸ್ತನಲ್ಲಿ ಸುರಕ್ಷಿತವಾಗಿಡಲ್ಪಟ್ಟವರಿಗೂ ಬರೆಯವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಕ್ರಿಸ್ತಾಚೊ ಸೆವಕ್ ಅನಿ ಜಾಕೊಬಾಚ್ಯಾ ಭಾವಾ ಜುದಾನ್ ದೆವಾಚ್ಯಾ ಪ್ರೆಮಾತ್ ಅನಿ ಜೆಜು ಕ್ರಿಸ್ತಾಸಾಟ್ನಿ ರಾಕುನ್ ಥವಲ್ಲ್ಯಾಕ್ನಿ ಲಿವ್ತಲಿ ಚಿಟ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:1
40 ತಿಳಿವುಗಳ ಹೋಲಿಕೆ  

ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ಆಗ ಯೂದನು, (ಈತ ಇಸ್ಕರಿಯೋತಿನ ಯೂದನಲ್ಲ) “ಪ್ರಭೂ, ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ, ಏಕೆ?” ಎಂದು ಕೇಳಿದನು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


ಇವರನ್ನು ಲೋಕದಿಂದ ತೆಗೆದುಬಿಡಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿಂದ ಇವರನ್ನು ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.


ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.


ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಯೆಹೂದ್ಯ ಜನಾಂಗದಿಂದ ಮಾತ್ರವಲ್ಲ, ಇತರ ಜನಾಂಗದಿಂದಲೂ ಕರೆಯಲಾಗಿರುವ ನಾವೇ ಈ ಕರುಣೆಯ ಕುಡಿಕೆಗಳು.


ನಾನು ಯಾವ ದೇವರ ಭಕ್ತನಾಗಿದ್ದೇನೋ, ಯಾವ ದೇವರನ್ನು ಆರಾಧಿಸುತ್ತೇನೋ ಆ ದೇವರ ದೂತನು ನಿನ್ನೆ ರಾತ್ರಿ ದರ್ಶನವಿತ್ತನು:


ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ.


“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.


ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.


ಅಂದ್ರೆಯ, ಫಿಲಿಪ್ಪ, ಬಾರ್ತಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಕೋಬ, ತದ್ದಾಯ, ದೇಶಾಭಿಮಾನಿ ಆದ ಸಿಮೋನ ಮತ್ತು


ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ;


ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?


ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು.


ಯೇಸುಕ್ರಿಸ್ತರಿಗೆ ಸ್ವಂತದವರಾಗಲು ಕರೆಹೊಂದಿರುವ ನೀವು ಕೂಡ ಈ ಸರ್ವಜನಾಂಗಗಳಲ್ಲಿ ಸೇರಿದ್ದೀರಿ.


ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.


ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು