Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:11 - ಕನ್ನಡ ಸತ್ಯವೇದವು C.L. Bible (BSI)

11 ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆಂಚಿ ಗತ್ ಕಾಯ್ ಸಾಂಗು! ತೆನಿ ಕಾಯಿನಾಚಿ ವಾಟ್ ಧರ್ಲ್ಯಾನಾತ್, ಕಮ್ವುತಲ್ಯಾ ಆಶೆಸಾಟ್ನಿ ಪುರಾ ಮಾಪಾನ್ ಬಾಲಾಮಾನ್ ಕರಲ್ಲ್ಯಾ ಸಾರ್ಕೆ ಚುಕ್ ಕರ್ಲ್ಯಾನಿ. ಅನಿ ತೆನಿ ಕೊರಾ ಮನ್ತಲ್ಯಾ ಮಾನ್ಸಾಚ್ಯಾ ಸಾರ್ಕೆ ಹುರ್ಪಾಟಿ ಬೊಲ್ಲ್ಯಾನಿ ಅನಿ ತೆಚೆ ಸಾರ್ಕೆಚ್ ನಾಸ್ ಹೊವ್ನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:11
21 ತಿಳಿವುಗಳ ಹೋಲಿಕೆ  

ಇವರು ಹಾದಿತಪ್ಪಿದವರು, ಸನ್ಮಾರ್ಗವನ್ನು ತ್ಯಜಿಸಿದವರು; ಬೆಯೋರನ ಮಗ ಬಿಳಾಮನ ದಾರಿಯನ್ನು ಹಿಡಿದವರು.


ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?


ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.


ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.


:ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.”


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಏಕೆಂದರೆ ನೀವು ಈಜಿಪ್ಟ್ ದೇಶದಿಂದ ಬಂದಾಗ ಅವರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರೂರಿನಿಂದ ಅವನನ್ನು ಕರೆಸಿದರು.


ಪೆಗೋರದ ಬಾಳನ ವಿಷಯದಲ್ಲಿ ಬಿಳಾಮನ ದುರಾಲೋಚನೆಯನ್ನು ಅನುಸರಿಸಿ, ಇಸ್ರಯೇಲರನ್ನು ಸರ್ವೇಶ್ವರನಿಗೆ ದ್ರೋಹಿಗಳನ್ನಾಗಿಸಿ, ಸಮಾಜದವರಲ್ಲಿ ಘೋರ ವ್ಯಾಧಿಯುಂಟಾಗುವಂತೆ ಮಾಡಿದವರು ಅವರೇ ಅಲ್ಲವೆ?


ಮಂದೆಕಾಯದ ಕುರುಬನಿಗೆ ಧಿಕ್ಕಾರ! ತಾಕುವುದು ಅವನ ತೋಳಿಗೂ ಬಲಗಣ್ಣಿಗೂ ಖಡ್ಗ ತೀರಾ ಬತ್ತಿಹೋಗಲಿ ಅವನ ತೋಳು ಪೂರಾ ಮಬ್ಬಾಗಲಿ ಅವನ ಬಲಗಣ್ಣು.


‘ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖಪ್ರವಾದಿಗಳಿಗೆ ಧಿಕ್ಕಾರ!


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”


ಯಾಜಕ ಊರೀಯನು ಅರಸನು ಹೇಳಿದಂತೆಯೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು